ವಿಮಾನ ಅಪಘಾತದಲ್ಲಿ ಮಡಿದವರಿಗೆ ಜಿಲ್ಲಾಡಳಿತ ಶ್ರದ್ಧಾಂಜಲಿ

Upayuktha
0

 


ಮಂಗಳೂರು:  2010 ಮೇ 22 ರಂದು ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದ ಸ್ಮರಣಾರ್ಥ ಜಿಲ್ಲಾಡಳಿತ ವತಿಯಿಂದ ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಶುಕ್ರವಾರ ನಡೆಯಿತು.


   ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ.


    ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮತ್ತು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಅಗಲಿದವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.


    ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ  ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top