ಉಡುಪಿ ಬಾಲಭವನದಲ್ಲಿ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ

Upayuktha
0


     ಉಡುಪಿ: ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಮೇ 4 ರಿಂದ 18 ವರೆಗೆ ಬೆಳಗ್ಗೆ 9.30 ರಿಂದ ಅಪರಾಹ್ನ 1 ಗಂಟೆಯವರೆಗೆ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ.

   ಸದರಿ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಕಲೆಗಳಾದ ಯೋಗ, ಚಿತ್ರಕಲೆ, ಕರಾಟೆ, ಕರಕುಶಲ, ನೃತ್ಯ ಹಾಗೂ ವ್ಯಕ್ತಿತ್ವ ವಿಕಸನ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು.

   ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ, ಬ್ರಹ್ಮಗಿರಿ, ಉಡುಪಿ ದೂ.ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top