ಸಚಿವ ಡಿ. ಸುಧಾಕರ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0


ಧರ್ಮಸ್ಥಳ: ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ  ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಡಿ. ಸುಧಾಕರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಅಪಾರ ಅಭಿಮಾನಿ ಮತ್ತು ಭಕ್ತರಾಗಿದ್ದರು ಎಂದು ನೆನಪಿಸಿಕೊಂಡಿದ್ದಾರೆ. 

ಅವರು ಕ್ಷೇತ್ರಕ್ಕೆ ಬಂದಾಗಲೆಲ್ಲಾ ಭಗವಾನ್ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸುದೀರ್ಘ ಕಾಲ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕ್ಷೇತ್ರದ ಆನೆ ಮರಿ ‘ಶಿವಾನಿ’ಯ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಚಿವರು ಅತ್ಯಂತ ಸಂತೋಷದಿಂದ ಪಾಲ್ಗೊಂಡಿದ್ದನ್ನು ಹೆಗ್ಗಡೆಯವರು ಸ್ಮರಿಸಿದ್ದಾರೆ. 

ಅಲ್ಲದೆ ಧರ್ಮಸ್ಥಳದ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿಯ ಸಭೆಗಳಲ್ಲಿ ಆಸಕ್ತಿಯಿಂದ ಭಾಗವಹಿಸಿ ಮಸ್ತಕಾಭಿಷೇಕದ ಯಶಸ್ಸಿಗೆ ಅವರು ನೀಡಿದ ಸಕ್ರಿಯ ಸಹಕಾರ ಮತ್ತು ಪ್ರೋತ್ಸಾಹವನ್ನು ಶ್ಲಾಘಿಸಿದ್ದಾರೆ. ಸರಕಾರವು ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಜನಾನುರಾಗಿಯಾಗಿದ್ದ ಸುಧಾಕರ್ ಅವರು ಶಾಸಕರಾಗಿ ಮತ್ತು ಸಚಿವರಾಗಿ ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿ ಕರುಣಿಸಲಿ ಎಂದು ವೀರೇಂದ್ರ ಹೆಗ್ಗಡೆಯವರು ಪ್ರಾರ್ಥಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top