ಉದ್ಯೋಗಾವಕಾಶ : ಮೇ 12 ರಂದು ನೇರ ಸಂದರ್ಶನ

Upayuktha
0

 


ಮಂಗಳೂರು: ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್, ಬೆಂಗಳೂರು ಕಂಪನಿಯ ವತಿಯಿಂದ ಸ್ಟೂಡೆಂಟ್ ಟ್ರೈನಿ  ಹುದ್ದೆಗೆ ನೇರ ಸಂದರ್ಶನವನ್ನು ಮೇ 12 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ 1:30 ರವರೆಗೆ  ಆಯೋಜಿಸಲಾಗಿದೆ.

    ನೇರ ಸಂದರ್ಶನದಲ್ಲಿ ಪಿ.ಯು.ಸಿ, ಐಟಿಐ, ಡಿಪೆÇ್ಲೀಮಾ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 25 ವರ್ಷದ ಒಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಕಂಪನಿ ವತಿಯಿಂದ ಉಚಿತವಾಗಿ ಬಿ.ವಾಕ್ (.ಗಿoಛಿ) ಪದವಿ ಕೋರ್ಸ್ ವಿದ್ಯಾಭ್ಯಾಸ ಒದಗಿಸಲಾಗುತ್ತದೆ. ಊಟ ಹಾಗೂ ವಸತಿ ಉಚಿತವಾಗಿ ನೀಡಲಾಗುತ್ತದೆ. ಆರೋಗ್ಯ ವಿಮೆ ಸೌಲಭ್ಯ ಇರುತ್ತದೆ.

    ಹೆಚ್ಚಿನ ಮಾಹಿತಿಗೆ ಮಂಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top