ಶ್ರೀ ಗಾಯತ್ರಿ ಪರಿವಾರದಿಂದ ವಾಸುದೇವ ಲಕ್ಷ್ಮಣ್ ರಾಯ್ಕರ್‌ರವರಿಗೆ ಸನ್ಮಾನ

Upayuktha
0

 


ದಾವಣಗೆರೆ: ಇಲ್ಲಿನ ಶ್ರೀ ಗಾಯತ್ರಿ ಪರಿವಾರದ ನೂತನ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ರವರಿಗೆ ಇತ್ತೀಚಿಗೆ ದಾವಣಗೆರೆಯ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ಶ್ರೀ ಗಾಯತ್ರಿ ಸ್ಮರಣಿಕೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ಶೆಣೈ ತಿಳಿಸಿದ್ದಾರೆ.

ಬುದ್ದ ಪೂರ್ಣಿಮೆಯ ಶ್ರೀ ಗಾಯತ್ರಿ ಪೂಜೆ ಉಪಾಸನೆಯಂದು ನಡೆದ ಕಾರ್ಯಕ್ರಮದಲ್ಲಿ ಕಲಾಕುಂಚ, ಶ್ರೀ ಗಾಯತ್ರಿ ಪರಿವಾರದ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಗಾಯಿತ್ರಿ ಪರಿವಾರದ ಸಂಚಾಲಕರಾದ ಭಾವನ್ನಾರಾಯಣ, ಸತೀಶ್ ಆರ್.ಎಂ., ವಿಕ್ರಂಜೈನ್, ಚನ್ನಬಸಪ್ಪ ಶೀಲವಂತ,  ಪರಿವಾರದ  ಸತ್ಯನಾರಾಯಣ ಮೂರ್ತಿ, ಲೋಹಿತಾಶ್ವ, ಶಾಂತಾರಾಮ, ಶ್ರೀಮತಿ ಆಶಾ ನಿತೀನ್ ಕಾಮತ್, ಯಕ್ಷರಂಗ ಯಕ್ಷಗಾನ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಶ್ರೀ ಗಾಯತ್ರಿ ಪರಿವಾರ, ಕಲಾಕುಂಚ, ಯಕ್ಷರಂಗ ಯಕ್ಷಗಾನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸರ್ವ ಸದಸ್ಯರು ವಾಸುದೇವ ಲಕ್ಷ್ಮಣ್ ರಾಯ್ಕರ್ರವರಿಗೆ ಅಭಿನಂದಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top