ಪಂಚರಾಜ್ಯ ಚುನಾವಣಾ ಫಲಿತಾಂಶ: ಬಿಜೆಪಿ ಪರ ಜನಾಭಿಪ್ರಾಯ ಸ್ಪಷ್ಟ: ಸತೀಶ್ ಕುಂಪಲ

Upayuktha
0



ಮಂಗಳೂರು, ಮೇ 4: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟಪಡಿಸಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.


ಮಾಧ್ಯಮ ಪ್ರಕಟಣೆಯಲ್ಲಿ ಅವರು, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಕೆಲವು ರಾಜಕೀಯ ಪಕ್ಷಗಳು ಅನುಸರಿಸಿದ್ದ ನೀತಿಗಳಿಗೆ ಮತದಾರರು ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು. ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿ ಸರ್ಕಾರ ರಚನೆಗೆ ಮುನ್ನಡೆ ಸಾಧಿಸಿರುವುದನ್ನೂ ಅವರು ಉಲ್ಲೇಖಿಸಿದರು.


ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷದ ಮತ ಗಳಿಕೆ ಏರಿಕೆಯು ಗಮನಾರ್ಹವಾಗಿದ್ದು, ಅಲ್ಲಿನ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು.


ಈ ಫಲಿತಾಂಶಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ಜನಪ್ರಿಯತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ದೇಶದಾದ್ಯಂತ ಬಿಜೆಪಿ ಪರ ಮನೋಭಾವ ವ್ಯಕ್ತವಾಗುತ್ತಿರುವುದು ಚುನಾವಣಾ ಫಲಿತಾಂಶಗಳಿಂದ ಸ್ಪಷ್ಟವಾಗುತ್ತದೆ ಎಂದು ಹೇಳಿದರು.


ಈ ಬಾರಿ ಫಲಿತಾಂಶಗಳು ಬಹುತೇಕ ಎಕ್ಸಿಟ್ ಪೋಲ್‌ಗಳ ಅಂದಾಜುಗಳನ್ನು ಮೀರಿರುವುದು ವಿಶೇಷ ಎಂದು ಅವರು ಹೇಳಿದರು.


ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮತ ನೀಡಿದ ಮತದಾರರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top