ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಮಹೋತ್ಸವದ ಧನ್ಯ ಸಂದರ್ಭದಲ್ಲಿ ಸಚಿವರಾದ ಈಶ್ವರ್ ಖಂಡ್ರೆ ಅವರು ಇಂದು ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಮಠದ ವತಿಯಿಂದ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಅವರು ಸಚಿವರಿಗೆ ಸಾಂಪ್ರದಾಯಿಕವಾಗಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಿದರು.
ಮಠದ ಭೇಟಿಯ ವೇಳೆಯಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಮುಖ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ