ಉಡುಪಿಯಲ್ಲಿ ದೇಶದ ಮೊದಲ ‘ವಿಶೇಷ ಮಕ್ಕಳ ಸಾಮರ್ಥ್ಯ ವನ’ ಪಾರ್ಕ್‌ಗೆ ಶಿಲಾನ್ಯಾಸ

Upayuktha
0

 


ಉಡುಪಿ: ವಿಕಲಚೇತನ ಮಕ್ಕಳ ಬೆಳವಣಿಗೆ, ಮನರಂಜನೆ ಮತ್ತು ಅವರ ಸಾಮರ್ಥ್ಯ ವೃದ್ಧಿಸುವ ಉದ್ದೇಶದಿಂದ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ನಗರದ ಬ್ರಹ್ಮಗಿರಿಯ ಬಾಲ್ ಭವನ್ ನಲ್ಲಿವಿಶೇಷ ಮಕ್ಕಳಿಗಾಗಿ ಸಾಮರ್ಥ್ಯ ವನ ಪಾರ್ಕ್ನಿರ್ಮಾಣವಾಗುತ್ತಿದೆ.

 

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶನಿವಾರ ಪಾರ್ಕ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಯೋಜನೆ ಜಾರಿಯಾಗುತ್ತಿದೆ.

 

ವಿಕಲಚೇತನ ಮಕ್ಕಳ ಸಮಗ್ರ ಪುನರ್ವಸತಿ, ಚಿಕಿತ್ಸಾ ಸೇವೆಗಳು, ಉದ್ಯೋಗಾವಕಾಶ ಮತ್ತು ಸ್ವತಂತ್ರ ಜೀವನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿಶಿಷ್ಟ ಪಾರ್ಕ್ ರೂಪುಗೊಳ್ಳುತ್ತಿದೆ. ಜಿಲ್ಲಾ ಪಂಚಾಯತ್ ಸಿಇಒ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕಸಾಮರ್ಥ್ಯ ಟ್ರಸ್ಟ್ರಚಿಸಲಾಗಿದ್ದು, ₹1.50 ಕೋಟಿ ಸರ್ಕಾರಿ ಅನುದಾನ ಮತ್ತು ವಿವಿಧ ಸಂಘ-ಸಂಸ್ಥೆಗಳ ನೆರವಿನಿಂದ ಒಟ್ಟು ₹4.90 ಕೋಟಿ ವೆಚ್ಚದಲ್ಲಿ ಪಾರ್ಕ್ ನಿರ್ಮಿಸಲಾಗುತ್ತದೆ.

 

ಉಡುಪಿ ಜಿಲ್ಲೆಯಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ 1,228 ವಿಕಲಚೇತನ ಮಕ್ಕಳು ಇದ್ದು, ಪಾರ್ಕ್ ಅವರು ಮತ್ತು ಅವರ ಕುಟುಂಬ ಸದಸ್ಯರಿಗೆ ಉಪಯುಕ್ತವಾಗಲಿದೆ. ಇಲ್ಲಿ ಥೆರಪಿ ಸ್ವಿಂಗ್ಸ್, ಬ್ಯಾಲನ್ಸ್ ಬೀಮ್ಸ್, ಸಂಗೀತ ವಾದ್ಯಗಳು, ಸ್ಪರ್ಶ ಸಂವೇದನಾ ಮಾರ್ಗಗಳು, ಮರಳು ಮತ್ತು ನೀರಿನ ಆಟದ ವಲಯಗಳು ಹಾಗೂ ಹೂಗಳ ಸುವಾಸನೆ ಅರಿಯುವ ಸೆನ್ಸರಿ ಪಾರ್ಕ್ ಸೇರಿದಂತೆ ಅನೇಕ ವಿಶೇಷ ಸೌಲಭ್ಯಗಳು ಇರಲಿವೆ.

 

ಶಿಲಾನ್ಯಾಸದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ಇದು ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೂ ಮಾದರಿಯಾಗುವ ಪಾರ್ಕ್ ಆಗಲಿದೆ. ನಾಲ್ಕು ವರ್ಷಗಳಲ್ಲಿ ಪೂರ್ಣಗೊಳಿಸುವ ಯೋಜನೆ ಇದ್ದರೂ, ಎರಡು ವರ್ಷಗಳಲ್ಲೇ ಕಾಮಗಾರಿ ಮುಗಿಸಿ ಉದ್ಘಾಟನೆ ಮಾಡುವ ಗುರಿ ಹೊಂದಿದ್ದೇವೆ. ಇಲಾಖೆಯಿಂದ ಶೀಘ್ರ ಅನುದಾನ ಬಿಡುಗಡೆ ಮಾಡಲಾಗುವುದು,” ಎಂದು ಹೇಳಿದರು.

 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಇಲಾಖೆಯ ರುದ್ರಣ್ಣ ರತ್ನ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಜೈವಿಠಲ್, ಹರಿಪ್ರಸಾದ ರೈ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top