ಕಾವಾ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

 


ಮೈಸೂರು: ಇಲ್ಲಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಯಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ವಿಷಯಗಳು: ಅನ್ವಯಿಕ ಕಲೆ, ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಛಾಯಾಗ್ರಹಣ, ಕಲಾ ಇತಿಹಾಸ, ಕನ್ನಡ, ಇಂಗ್ಲಿಷ್, ಭಾರತೀಯ ಸಂವಿಧಾನ, ಪರಿಸರ ಅಧ್ಯಯನ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಮ್ಮ ಬಯೋಡೇಟಾ ಮತ್ತು ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ಅನುಭವ) ಕಾವಾ ಕಚೇರಿಗೆ ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿ ಸಲ್ಲಿಸಬಹುದು. ಮೇ 15 ರಂದು ಅರ್ಜಿ ಸ್ವೀಕರಿಸಲು ಕೊನೆಯ ದಿನವಾಗಿದ್ದು, ಮೇ 19 ರಂದು ಬೆಳಿಗ್ಗೆ 11.00 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅಥವಾ ದೂ.ಸಂ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾವಾ ಪ್ರಕಟಣೆ ತಿಳಿಸಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top