ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

Upayuktha
0

 


ಮಂಗಳೂರು: 2026-27 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕೆಳಕಂಡ ಸಂಸ್ಥೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುತ್ತದೆ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2026 ಜುಲೈ 1 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ವಯೋಮಿತಿಯಲ್ಲಿರಬೇಕು.  ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.


ಸಂಸ್ಥೆಗಳ ವಿವರ:

1)ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)- 22 ಅಭ್ಯರ್ಥಿಗಳು,

2) ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)- 12 ಅಭ್ಯರ್ಥಿಗಳು,

3)ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ,    ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)- 3 ಅಭ್ಯರ್ಥಿಗಳು,

4)ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು(ಕೇರಳ) - 2 ಅಭ್ಯರ್ಥಿಗಳು.

ಅರ್ಜಿಗಳನ್ನು  ಅಧಿಕೃತ ವೆಬ್ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಡೌನಲೊಡ್ ಮಾಡಿಕೊಳ್ಳಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102” ಇವರಿಗೆ ಸಲ್ಲಿಸಲು ಕೊನೆಯ ದಿನ ಮೇ 30 ರವರೆಗೆ ವಿಸ್ತರಿಸಲಾಗಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ  ಮತ್ತು ಅರ್ಜಿ ಫಾರಂಗಳಿಗಾಗಿ ಗದಗ-ಬೆಟಗೇರಿ ನರಸಾಪೂರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರ ದೂರವಾಣಿ ಸಂ: 08372-259664 ಅಥವಾ ಮೊಬೈಲ್ ಸಂಖ್ಯೆ: 9916143619 ಅಥವಾ . ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರನ್ನು  (ದೂ.ಸಂ:9945035589/ 9449145293) ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top