ಹಾಸನ: ಎಸ್‌.ಎಸ್.ಎಲ್‌.ಸಿ. ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ

Upayuktha
0



ಹಾಸನ: ಅಕ್ಷರ ಕಲಿಸಿದ ಗುರುವರ್ಯರನ್ನು ನಿತ್ಯವೂ ಸ್ಮರಿಸುವುದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ. ಗುರುವಂದನಾ ಕಾರ್ಯಕ್ರಮದ ಮೂಲಕ ತಮ್ಮ ಗುರುಗಳನ್ನು ಗೌರವಿಸಿ ಆಶೀರ್ವಾದ ಪಡೆಯುವುದು ಪುಣ್ಯದ ಕೆಲಸ. ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಹೋಬಳಿ ಕೇಂದ್ರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಕಲಿತ 1998- 99ನೇ ಸಾಲಿನ ಎಸ್‌.ಎಸ್.ಎಲ್‌.ಸಿ. ಹಿರಿಯ ವಿದ್ಯಾರ್ಥಿಗಳಿಂದ ಗುರುವರ್ಯರಿಗೆ ಗುರುವಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಗುರುವಂದನೆ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಗುರುವಂದನೆ ಸ್ವೀಕರಿಸಿ ಮಾತನಾಡಿದ ಸರ್ಕಾರಿ ಪ್ರೌಢಶಾಲೆಯ 1998-99 ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ಪ್ರಸ್ತುತ ಹಾಸನದ ಆರ್.ಸಿ. ರಸ್ತೆಯಲ್ಲಿರುವ ಜಿ ಜಿ ಜೆ ಸಿ ಪ್ರಧಾನ ಪ್ರೌಢಶಾಲಾ ವಿಭಾಗದ ಉಪಪ್ರಾಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ರವರು ಮಾತನಾಡಿ, ಗುರು ಶಿಷ್ಯರ ಸಂಬಂಧ ಅಂತ್ಯಗೊಂಡು 28 ವರ್ಷಗಳೇ ಕಳೆದಿವೆ ಆದರೂ ತನ್ನ ನೆಚ್ಚಿನ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮದ ಮೂಲಕ ಗೌರವ ಸಲ್ಲಿಸುತ್ತಿರುವುದು ವಿದ್ಯಾರ್ಥಿಗಳಿಗೆ ಶಿಕ್ಷಕರ ಮೇಲಿರುವ ಗೌರವ ಪ್ರೀತಿಯನ್ನು ತೋರುತ್ತದೆ, ಗುರು ಶಿಷ್ಯರ ಸಂಬಂಧ ಎಂದಿಗೂ ಕೊನೆಗೊಳ್ಳುವ ಬಾಂಧವ್ಯವಲ್ಲ, ಅದೊಂದು ಪವಿತ್ರವಾದ ಸಂಬಂಧವಾಗಿದೆ. ಆಧುನಿಕ ಕಾಲಘಟ್ಟದಲ್ಲಿ ಆಧುನಿಕತೆ ಬೆಳೆದಂತೆ ಎಲ್ಲವೂ ಬದಲಾಗುತ್ತಿದೆ ಆದರೆ ಇವತ್ತಿನ ಇಂತಹ ಪರಿಸ್ಥಿತಿಯಲ್ಲಿ ಕಳೆದ 28 ವರ್ಷಗಳ ನಂತರ ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವ ಮೂಲಕ ಗುರುವಂದನ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಿ ರುವುದು ಹೆಚ್ಚು ಖುಷಿ ತಂದಿದೆ ಎಂದರು.


1998-99ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿತ್ತು ಇಂದಿಗೂ ನಾನು ಫಲಿತಾಂಶವನ್ನು ಮರೆತಿಲ್ಲ, ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದರೆ ಮಕ್ಕಳ ಭವಿಷ್ಯ ರೂಪಗೊಳ್ಳಲು ಸಾಧ್ಯ ಎಂದರು.


ಗುರುವಂದನೆ ಎಂಬ ಶೀರ್ಷಿಕೆಯಲ್ಲಿ ಗುರು ಶಿಷ್ಯರ ಸಮಾಗಮ ಕಾರ್ಯಕ್ರಮದಲ್ಲಿ ಪ್ರತಿ ಶಿಕ್ಷಕರನ್ನು ಮಾತನಾಡಿಸಿ ಅವರ ಸಲಹೆ ಮಾರ್ಗದರ್ಶನದ ಜೊತೆಗೆ ನಿವೃತ್ತಿಯ ಜೀವನದ ನಂತರ ಅವರು ಯಾವ ರೀತಿ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ಮುಂಬರುವ ದಿನಗಳಲ್ಲಿ ನಾವು ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಕುರಿತು ಹಿರಿಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರಿಂದ ಸಲಹೆ ಸೂಚನೆಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ತಮ್ಮನೆಚ್ಚಿನ ಶಿಕ್ಷಕರಾದ ಮಂಜುನಾಥ್, ಹೆಚ್.ಎಸ್.ಸತೀಶ್, ಎಂ.ಸಿ. ಹಲಗೇಗೌಡ, ಸೂರ್ಯನಾರಾಯಣ, ಪಿ.ರಾಮಸ್ವಾಮಿ, ಜೆ.ಹಿರಿಯಣ್ಣ, ಜಿ.ವಿ.ವಿಜಯ ಕುಮಾರಿ, ಅವರುಗಳನ್ನು ಹಿರಿಯ ವಿದ್ಯಾರ್ಥಿಗಳು ಹೃದಯಪೂರ್ವಕವಾಗಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಹಿರಿಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರು ಹಾಗೂ ತನ್ನ ಒಳನಾಡಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top