ಜೂನ್ ನಿಂದ ಬಳ್ಳಾರಿಯಲ್ಲಿ ಹೆಲ್ಮೆಟ್ ಕಡ್ಡಾಯ : ಎಸ್ ಪಿ ಸುಮನ್ ಡಿ ಪನ್ನೇಕರ್

Upayuktha
0

ಬಳ್ಳಾರಿ: ಬೇಸಿಗೆ ಎಂದು   ಹೆಲ್ಮೆಟ್ ಕಡ್ಡಾಯಕ್ಕೆ ರಿಲ್ಯಾಕ್ಸ್ ನೀಡಲಾಗಿದೆ ಎಂದು ಸಾರ್ವಜನಿಕರು ತಪ್ಪು ತಿಳಿದುಕೊಂಡಿದ್ದಾರೆ ಬಹಳಷ್ಟು ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರು ತಲೆಗೆ ಪೆಟ್ಟಾಗಿ ಜೀವ ಕಳೆದುಕೊಂಡಿದ್ದಾರೆ ಆದ್ದರಿಂದ ಬಳ್ಳಾರಿ ಯಲ್ಲಿ ಜೂನ್ ಒಂದರಿಂದ  ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್  ಕಡ್ಡಾಯಗೊಳಿಸಲಾಗಿದೆ ಎಂದು  ಎಸ್ಪಿ ಡಾ. ಸುಮನ್ ಡಿ.ಪನ್ನೇಕರ್ ತಿಳಿಸಿದ್ದಾರೆ.


ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇಂದಿನಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಖಡ್ಡಾಯ ಕುರಿತು  ಜೂನ್ ಒಂದರ ವರೆಗೆ ಜಾಗೃತಿ ಅಭಿಯಾನ ನಡೆಸಿ ಪ್ರಮುಖ ಸರ್ಕಲ್ಗಳಲ್ಲಿ ಉಚಿತವಾಗಿ ಹೆಲ್ಮೆಟ್ ಗಳನ್ನು ವಿತರಿಸಲಾಗುವುದು ಎಂದರು. 


ಕಳೆದ 3 ವರ್ಷದಲ್ಲಿ ದ್ವಿಚಕ್ರ ವಾಹನಗಳಿಂದ 1009 ಪ್ರಕರಣಗಳು ದಾಖಲಾಗಿದ್ದು ಇದರಲ್ಲಿ 462 ಜನರು ಸಾವನ್ನಪ್ಪಿದ್ದಾರೆ, 1072 ಜನರು ಗಾಯಾಳುಗಳಾಗಿದ್ದಾರೆ. ಇದರಲ್ಲಿ ಹೆಲ್ಮೆಟ್ ಇಲ್ಲದೆ ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಂಡ  ಘಟನೆ ಹೆಚ್ಚಾಗ್ತಿದೆಜೂನ್ 1ರಿಂದ ಖಡ್ಡಾಯವಾಗಿ ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದರು. ಆಪ್ರಾಪ್ತರು ಬೈಕ್ ಚಾಲನೆ ಮಾಡಿದರೆ ಅವರ ಪೋಷಕರಿಗೆ ಅಥವಾ ವಾಹನದ ಆರ್.ಸಿ. ಮಾಲೀಕರಿಗೆ 25   ಸಾವಿರ ರೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top