ಮಂಗಳೂರು:
ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ
ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು
ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ
ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ
ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ
ಲೋಕಾರ್ಪಣೆ ಮಾಡುತ್ತಿದೆ. ಈ ಐತಿಹಾಸಿಕ ಮತ್ತು
ಸಾಂಸ್ಕೃತಿಕ ಮಹತ್ವದ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಸನ್ಮಾನ್ಯ ಜ| ಎಸ್. ಅಬ್ದುಲ್
ನಜೀರ್ ಅವರು ಆಗಮಿಸಿ, ನಾಲ್ಕೂ
ಸಭಾಂಗಣಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ.
ಅತ್ಯಾಧುನಿಕ
ಸೌಲಭ್ಯಗಳು, ಐಷಾರಾಮಿ ವಿನ್ಯಾಸ ಹಾಗೂ ಪ್ರಕೃತಿಯ ಸೊಬಗನ್ನು
ಮೈಗೂಡಿಸಿಕೊಂಡಿರುವ ಈ ನಾಲ್ಕು ಅದ್ದೂರಿ
ಪಾಲೆಮಾರ್ ಸಭಾಂಗಣಗಳ ಮಹಾ ಲೋಕಾರ್ಪಣಾ ಸಮಾರಂಭವು
ಮೇ 23, 2026 ರ ಶನಿವಾರದಂದು ಅತ್ಯಂತ
ವೈಭವದಿಂದ ಜರುಗಲಿದೆ. ಅಂದು ಬೆಳಿಗ್ಗೆ 10:00 ಗಂಟೆಗೆ
ಮಂಗಳೂರಿನ ಮೇರಿಹಿಲ್ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ.
ಸಮಾರಂಭದಲ್ಲಿ
ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ,
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಯು. ಟಿ.
ಖಾದರ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಂಗಳೂರು ನಗರ
ಉತ್ತರ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್
ಶೆಟ್ಟಿ, ಮಂಗಳೂರು ನಗರ ದಕ್ಷಿಣ ಕ್ಷೇತ್ರದ
ಶಾಸಕರಾದ ಶ್ರೀ ಡಿ. ವೇದವ್ಯಾಸ
ಕಾಮತ್, ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್
ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಐವನ್ ಡಿಸೋಜ
ಸೇರಿದಂತೆ ಕರಾವಳಿ ಮತ್ತು ರಾಜ್ಯ ಮಟ್ಟದ ಹಲವಾರು ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಹಾಗೂ ಉದ್ಯಮಿಗಳು ಭಾಗವಹಿಸಲಿದ್ದಾರೆ.
ಈ ಮಹತ್ವಾಕಾಂಕ್ಷಿ ಯೋಜನೆಯು ಲ್ಯಾಂಡ್ ಲಿಂಕ್ಸ್ ಗ್ರೂಪ್ನ ಅಧ್ಯಕ್ಷರು ಮತ್ತು
ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೃಷ್ಣ
ಜೆ. ಪಾಲೆಮಾರ್ ಅವರ ಕನಸಿನ ಕೂಸಾಗಿದೆ.
ಕರಾವಳಿಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಒತ್ತು ನೀಡುವುದು ಮತ್ತು ಇಲ್ಲಿನ ಜನರಿಗೆ ಸುಲಭವಾಗಿ ಕೈಗೆಟುಕುವ ದರದಲ್ಲಿ ಅತ್ಯುನ್ನತ ಸೌಲಭ್ಯಗಳ ಸಭಾಂಗಣಗಳನ್ನು ಒದಗಿಸುವುದು ಅವರ ಮೂಲ ಉದ್ದೇಶವಾಗಿದೆ.
ಈ ಸಭಾಭವನಗಳು ವಿವಾಹ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು, ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು, ಉದ್ಯೋಗ ಮೇಳಗಳು, ವಸ್ತು ಪ್ರದರ್ಶನಗಳು, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಮಹಿಳಾ ಸಬಲೀಕರಣದಂತಹ
ಸಮಾಜಮುಖಿ ಚಟುವಟಿಕೆಗಳಿಗೆ ಮುಕ್ತವಾಗಿರಲಿವೆ.
ಲೋಕಾರ್ಪಣಾ
ಸಮಾರಂಭದ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿರುವ
ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಈ ಮೂಲಕ ಯುವ
ಪೀಳಿಗೆಯು ದೇಶದ ಪ್ರಗತಿಗೆ ಮತ್ತಷ್ಟು
ಕೊಡುಗೆ ನೀಡಲು ಸ್ಫೂರ್ತಿ ತುಂಬಲಾಗುವುದು.
ಪ್ರತಿಯೊಂದು
ಸಭಾಭವನವನ್ನು ಅತ್ಯಂತ ಚಿಂತನಶೀಲವಾಗಿ ರೂಪಿಸಲಾಗಿದ್ದು, ಸರ್ವ ಧರ್ಮದವರೂ ತಮ್ಮ
ಇಷ್ಟದ ಶೈಲಿಯಲ್ಲಿ ಅತ್ಯಂತ ಆರಾಮದಾಯಕವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ. ಬಂದ ಅತಿಥಿಗಳು ಪ್ರಶಾಂತ
ಹಾಗೂ ನಿರಾಳ ವಾತಾವರಣದಲ್ಲಿ ಕಾಲ ಕಳೆಯಲು ಇವು
ಸೂಕ್ತ ತಾಣಗಳಾಗಿವೆ.
1. ಪಾಲೆಮಾರ್
ಕನ್ವೆನ್ಶನ್ ಸೆಂಟರ್, ಮೇರಿಹಿಲ್, ಮಂಗಳೂರು
2. ಪಾಲೆಮಾರ್
ಗಾರ್ಡನ್, ಮೋರ್ಗನ್ಸ್ ಗೇಟ್, ಮಂಗಳೂರು
3. ಪಾಲೆಮಾರ್
ಫಾರ್ಮ್ಸ್, ಸುರತ್ಕಲ್, ಮಂಗಳೂರು
4. ನೇತ್ರಾವತಿ
ಸಭಾಭವನ, ಕಡೆಕಾರ್, ಜೆಪ್ಪಿನಮೊಗರು, ಮಂಗಳೂರು
ಅತೀ
ಶೀಘ್ರದಲ್ಲಿಯೇ ಮಂಗಳೂರಿನ ಕಡಲ ತೀರದಲ್ಲಿ ತೆರೆದ
ಸಭಾಂಗಣ
ಇದೇ
ಮೊದಲ ಬಾರಿಗೆ, ಕಡಲ ನಗರಿ ಮಂಗಳೂರಿನ
ಸಮುದ್ರ ತೀರದಲ್ಲಿ ಅದ್ದೂರಿ, ಭವ್ಯ ಸಮಾರಂಭಗಳನ್ನು ನಡೆಸಲು
ಸುಸಜ್ಜಿತ ತೆರೆದ ಸಭಾಂಗಣ ಸಿದ್ಧಗೊಳ್ಳುತ್ತಿದೆ. ಶೀಘ್ರದಲ್ಲೇ ಈ ಸಭಾಂಗಣವೂ ಸಾರ್ವಜನಿಕರಿಗಾಗಿ
ಲಭ್ಯವಾಗಲಿದೆ.
ಹೆಚ್ಚಿನ
ಮಾಹಿತಿಗಾಗಿ:
7411394759, 7483574759, 9148435759
ಅಧಿಕೃತ
ವೆಬ್ಸೈಟ್: www.palemar.com
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



