ಭಾರತ ಶ್ರೇಷ್ಠ ಸಂತ ಪರಂಪರೆಯ ನಾಡು: ಡಾ. ಕಲ್ಲಡ್ಕ ಪ್ರಭಾಕರ್ ಭಟ್

Upayuktha
0

 


 

ಸುರತ್ಕಲ್: ಜಾಗತಿಕ ಮಟ್ಟದಲ್ಲಿ ಸಂಸ್ಕೃತಿ, ಪರಂಪರೆ, ಆದರ್ಶಗಳು ಸಮೃದ್ಧವಾಗಿರುವ ಭಾರತ ದೇಶದಂತಹ ಇನ್ನೊಂದು ದೇಶ ಇರಲು ಸಾಧ್ಯವಿಲ್ಲ ಎಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ನುಡಿದರು.

 

ಅವರು ಕರ್ನಾಟಕ ಮಹಾವಿದ್ಯಾಲಯ  ಶಿಕ್ಷಕರ ಸಂಘ ಮತ್ತು ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘ (ರಿ) ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್ ಹಿಂದಿ ವಿಭಾಗ ಸಂತ ರವಿದಾಸರ 650ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಂಟಿಯಾಗಿ ಆಯೋಜಿಸಿದಭಾರತೀಯ ಸಂತ ಪರಂಪರೆಎಂಬ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 

ಭಾರತವು ಶ್ರೇಷ್ಠ ಸಂತಪರಂಪರೆಯನ್ನು ಹೊಂದಿದ್ದು ಸಂತ ರವಿದಾಸರಂತಹ ಸಂತರು ಸಾರಿದ ತತ್ವಗಳನ್ನು ಯುವ ಜನತೆ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಭಾರತವನ್ನು  ವಿಶ್ವಗುರುವನ್ನಾಗಿಸಲು ಪ್ರಯತ್ನಿಸಬೇಕು ಮತ್ತು ನಾವು ಭವ್ಯ ಪರಂಪರೆಯನ್ನು ಹೊಂದಿದ ಭಾರತ ದೇಶದ ಪ್ರಜೆಗಳು ಎಂಬ ಹೆಮ್ಮೆ ನಮ್ಮಲ್ಲಿರಬೇಕು ಎಂದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಜಯಚಂದ್ರ ಎಸ್. ಹತ್ವಾರ್ ಮಾತನಾಡಿ ವಿದ್ಯಾ ಸಂಸ್ಥೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಯುವಜನರಲ್ಲಿ ಭಾರತದ ಭವ್ಯ ಪರಂಪರೆಯ ಬಗೆಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.

 

ಕೆ.ಆರ್.ಎಂ.ಎಸ್.ಎಸ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ, ರಮೇಶ್ ಭಟ್ ಎಸ್.ಜಿ., ಕೆ.ಆರ್.ಎಂ.ಎಸ್.ಎಸ್ ಮಂಗಳೂರು ವಿಭಾಗದ  ಅಧ್ಯಕ್ಷೆ ಡಾ. ಸುಧಾ ಯು., ಸದಸ್ಯೆ  ಸೌಮ್ಯ, ಗೋವಿಂದ ದಾಸ ಕಾಲೇಜಿನ ಉಪನ್ಯಾಸಕ ವರ್ಗ, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಪ್ರಾಂಶುಪಾಲ ಪ್ರೊ. ಹರೀಶ ಆಚಾರ್ಯ ಪಿ. ಸ್ವಾಗತಿಸಿ,  ಹಿಂದಿ ವಿಭಾಗದ ಮುಖ್ಯಸ್ಥೆ ಜ್ಯೋತಿ ಕಾಮತ್ ವಂದಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ. ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)
To Top