ಸಂತ ರವಿದಾಸರ 650ನೇ ಜಯಂತಿ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ
ಮಂಗಳೂರು:
ಎಸ್.ಸಿ.ಎಸ್ ಪ್ರಥಮ
ದರ್ಜೆ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮಂಗಳೂರು ವಿಭಾಗ
ಹಾಗೂ ಕಾಲೇಜಿನ ಹಿಂದಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಸಂತ ರವಿದಾಸರ 650ನೇ
ಜಯಂತಿಯ ಅಂಗವಾಗಿ “ಭಾರತೀಯ ಸಂತ ಪರಂಪರೆ” ವಿಷಯದ ಉಪನ್ಯಾಸಮಾಲೆ–
2 ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಆರಂಭದಲ್ಲಿ ಸಂತ ರವಿದಾಸರ ಭಾವಚಿತ್ರಕ್ಕೆ
ಗಣ್ಯರು ಪುಷ್ಪನಮನ ಸಲ್ಲಿಸಿದರು. ಬಳಿಕ ದೀಪ ಪ್ರಜ್ವಲನೆ
ಮಾಡುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ
ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿದ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ
ಪ್ರದೀಪ್ ಕುಮಾರ್ ಕಲ್ಕೂರ ಅವರು ಸಂತ ರವಿದಾಸರ
ಜೀವನ, ತತ್ವಗಳು ಹಾಗೂ ಸಮಾಜ ಪರಿವರ್ತನೆಯಲ್ಲಿ
ಅವರ ಪಾತ್ರದ ಕುರಿತು ವಿಸ್ತಾರವಾಗಿ ಮಾತನಾಡಿದರು. ಜಾತಿ ಭೇದ, ಅಸಮಾನತೆ
ಮತ್ತು ಅಹಂಕಾರದಿಂದ ಕೂಡಿದ ಕಾಲಘಟ್ಟದಲ್ಲಿಯೇ ಸಂತ ರವಿದಾಸರು ಮಾನವೀಯತೆ,
ಸಮಾನತೆ ಮತ್ತು ಪ್ರೀತಿಯ ಸಂದೇಶವನ್ನು ಸಾರಿದ ಮಹಾನ್ ಸಂತರು ಎಂದು ಹೇಳಿದರು.
ಕಾರ್ಯಕ್ರಮದ
ಸಂಪನ್ಮೂಲ ವ್ಯಕ್ತಿ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇದರ ಪ್ರಾಧ್ಯಾಪಕಿ ಪ್ರೊ.
ನಾಗರತ್ನ ರಾವ್ ಅವರು “ಭಾರತೀಯ
ಸಂತ ಪರಂಪರೆ” ವಿಷಯದ ಕುರಿತು ಆಳವಾದ ಉಪನ್ಯಾಸ ನೀಡಿದರು. ಭಾರತೀಯ ಸಂತರು ಸಮಾಜದಲ್ಲಿ ಸಮಾನತೆ, ಪ್ರೀತಿ, ಭಕ್ತಿ ಮತ್ತು ಮಾನವೀಯ ಮೌಲ್ಯಗಳನ್ನು ಹೇಗೆ ಬಿತ್ತರಿಸಿದರು ಎಂಬುದನ್ನು
ಅವರು ಉದಾಹರಣೆಗಳೊಂದಿಗೆ ವಿವರಿಸಿದರು. ಸಂತ ರವಿದಾಸರ ವಚನಗಳು
ಇಂದಿನ ಯುವಜನತೆಗೆ ದಾರಿದೀಪವಾಗಿದ್ದು, ಜೀವನದಲ್ಲಿ ಪರಿಶ್ರಮ ಹಾಗೂ ವಿನಯವನ್ನು ಅಳವಡಿಸಿಕೊಳ್ಳುವಂತೆ
ಪ್ರೇರೇಪಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ವಹಿಸಿ
ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪಾಠ ಪುಸ್ತಕದ
ಜ್ಞಾನಕ್ಕೆ ಸೀಮಿತವಾಗದೆ, ಶರಣರು ಮತ್ತು ಸಂತರು ಬೋಧಿಸಿದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ ಎಂದು ಅಭಿಪ್ರಾಯಪಟ್ಟರು.
ಡಾ.
ಮಾಧವ ಎಂ.ಕೆ., ಪ್ರಾಧ್ಯಾಪಕರು,
ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ
ಮಹಾವಿದ್ಯಾಲಯ ಶಿಕ್ಷಕರ ಸಂಘದ ರಾಜ್ಯ ಜಂಟಿ
ಕಾರ್ಯದರ್ಶಿಗಳು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದ ಸಂಯೋಜಕರಾದ
ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಅತಿಥಿಗಳನ್ನು
ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಚಿತ್ರ ಪಿ. ಶೆಟ್ಟಿ ವಂದಿಸಿದರು.
ಪ್ರಥಮ ಬಿ.ಬಿ.ಎ
ವಿದ್ಯಾರ್ಥಿನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


