ಮಾನಸ ಟ್ರಸ್ಟ್ , ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಅಂತರರಾಷ್ತ್ರೀಯ ದಾದಿಯರ ದಿನಾಚರಣೆ

Upayuktha
0


ಶಿವಮೊಗ್ಗ: ಮಾನಸ ಟ್ರಸ್ಟ್ , ಕಟೀಲ್ ಅಶೋಕ್ ಪೈ ಮೆಮೋರಿಯಲ್ ಇನಸ್ಟಿಟ್ಯೂಟ್ ಆಫ್  ನರ್ಸಿಂಗ್ ವತಿಯಿಂದ ಮೇ12 ರಂದು ಕಾಲೇಜಿನ ಸಭಾಂಗಣದಲ್ಲಿ “ಅಂತರರಾಷ್ತ್ರೀಯ ದಾದಿಯರ ದಿನಾಚರಣೆ” ಯನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಲ್ಲಿಕಾರ್ಜುನ ಎಸ್ ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಾದಿಯರು ಆರೋಗ್ಯ ಕ್ಷೇತ್ರದ ಬೆನ್ನೆಲುಬಾಗಿದ್ದು, ರೋಗಿಗಳ ಆರೈಕೆ, ಸೇವಾಭಾವನೆ ಹಾಗೂ ಮಾನವೀಯತೆಯ ಮೂಲಕ ಸಮಾಜದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ತಿಳಿಸಿದರು.


ಪ್ರತಿಯೊಬ್ಬ ವಿದ್ಯಾರ್ಥಿಯೂ ಸೇವಾ ಮನೋಭಾವ, ಶಿಸ್ತು ಹಾಗೂ ಕರುಣೆಯೊಂದಿಗೆ ವೃತ್ತಿಜೀವನವನ್ನು ನಡೆಸಬೇಕೆಂದು ಕರೆ ನೀಡಿದರು.


ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಕೈ ಸ್ವಚ್ಛತೆ ಮತ್ತು ಸಿ.ಪಿ.ಆರ್. ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕೈ ಸ್ವಚ್ಛತೆಯ ಸರಿಯಾದ ವಿಧಾನ ಹಾಗೂ ತುರ್ತು ಪರಿಸ್ಥಿಯಲ್ಲಿ ಸಿ.ಪಿ.ಆರ್. ನೀಡುವ ಕ್ರಮಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮತ್ತು ತುರ್ತು ಆರೈಕೆಯ ಮಹತ್ವದ ಬಗ್ಗೆ ಅರಿವು ಮೂಡಿಸಿತು.


ನರ್ಸಿಂಗ್ ಪದವಿ ನಂತರ ವಿದೇಶಗಳಲ್ಲಿ ನರ್ಸಿಂಗ್ ವೃತ್ತಿಗೆ ಉತ್ತಮ ವೇತನದೊಂದಿಗೆ ಬಹು ಬೇಡಿಕೆಯಿದ್ದು, ಭಾರತದಲ್ಲಿ ಸರ್ಕಾರಿ ಉದ್ಯೋಗದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಪ್ರೇರೇಪಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಭೋದಕ ಮತ್ತು ಭೋದಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆಯೊಂದಿಗೆ ಯಶಸ್ವಿಯಾಗಿ ಸಮಾಪ್ತಿಯಾಯಿತು.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top