ಜೇಸಿಐ ಉಡುಪಿ ಸಿಟಿ ವತಿಯಿಂದ ಟಾಪ್ ಟ್ರೈನರ್ಸ್ ಟ್ರೈನಿಂಗ್ ಕಾರ್ಯಕ್ರಮ

Upayuktha
0


ಉಡುಪಿ: ವಲಯ 15 ರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೇಸಿಐ ಉಡುಪಿ ಸಿಟಿ ವತಿಯಿಂದ ಟಾಪ್ ಟ್ರೈನರ್ಸ್ ಟ್ರೈನಿಂಗ್ ಕಾಯ೯ಕ್ರಮ ಮಥುರಾ ಕಂಫರ್ಟ್ ನಲ್ಲಿ ಮೇ 10 ಆದಿತ್ಯವಾರ ನಡೆಯಿತು.


ಕಾರ್ಯಕ್ರಮದ ಪ್ರಧಾನ ತರಬೇತುದಾರರಾಗಿ ಜೇಸಿ ರಾಷ್ಟ್ರೀಯ ತರಬೇತಿದಾರರು, ಖ್ಯಾತ ಭಾಷಣಕಾರ ರಾಜೇಂದ್ರ ಭಟ್. ಕೆ ಆಗಮಿಸಿ ಉತ್ತಮ ತರಬೇತಿ ನೀಡಿದರು.


ಕಾರ್ಯಕ್ರಮ ಉದ್ಘಾಟನೆಯನ್ನು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ನೆರವೇರಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿ ಯುವ ನಾಯಕಿ ಮನು ಶೆಟ್ಟಿ ಇನ್ನಾ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಾಧ್ಯಕ್ಷೆ ಗಗನಾ ಎಂ.ಬಿ ವಹಿಸಿದ್ದರು. ವೇದಿಕೆಯಲ್ಲಿ ಜೇಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು, ಜೆಜೆಸಿ ವಿಶ್ವಾಸ್, ಸೃಜನ್ ಶೆಟ್ಟಿ ಉಪಸ್ಥಿತರಿದ್ದರು.


ರಾಷ್ಟ್ರೀಯ ತರಬೇತಿದಾರ ಬಾಸುಮ ಕೊಡಗು, ಉದಯ್ ನಾಯ್ಕ್, ಕಾವ್ಯ ವಾಣಿ ಕೊಡಗು, ಸ್ಮಿತಾ ಪಾಟೀಲ್ ಮತ್ತು ಸದಸ್ಯರು ಉಪಸ್ಥಿತರಿದ್ದರು.


ಇತ್ತೀಚಿಗೆ ನಿಧನರಾದ ಪೂರ್ವ ವಲಯಾಧ್ಯಕ್ಷ ಉದಯಕುಮಾರ್ ಶೆಟ್ಟಿ ಇನ್ನಾ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top