ಉಡುಪಿ: ಸಂತಕವಿ
ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ
ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅಥವಾ ಮೊ.ನಂ: 9743545865 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


