ಸಚಿವ ಡಿ. ಸುಧಾಕರ್ ನಿಧನ

Upayuktha
0



ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.


ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ನಿಧನರಾದರು. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು.


ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.


ಸ್ಪೀಕರ್ ಖಾದರ್ ಸಂತಾಪ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಹಿರಿಯ ಸದಸ್ಯರು ಹಾಗೂ ಸಚಿವರಾಗಿದ್ದ ಡಾ. ಸುಧಾಕರ್ ಅವರ ನಿಧನದ ಕುರಿತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಅವರು, ಡಾ. ಸುಧಾಕರ್ ಅವರು ನಾಲ್ಕು ಬಾರಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು, ಸಮಾಜ ಕಲ್ಯಾಣ ಸಚಿವರಾಗಿ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿದರು. ತಮ್ಮ ಸರಳ ವ್ಯಕ್ತಿತ್ವ ಹಾಗೂ ಜನಪರ ಕಾರ್ಯಗಳ ಮೂಲಕ ಅವರು ಜನಮನದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು ಎಂದು ಹೇಳಿದರು.


ಡಾ. ಸುಧಾಕರ್ ಅವರ ಅಗಲಿಕೆ ರಾಜ್ಯಕ್ಕೆ ಮಾತ್ರವಲ್ಲದೆ ಹಿರಿಯೂರು ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟವಾಗಿದೆ ಎಂದು ಖಾದರ್ ಅವರು ತಿಳಿಸಿದ್ದಾರೆ.


ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರು, ಬಂಧುಗಳು ಹಾಗೂ ಅಭಿಮಾನಿಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸಿರುವ ಅವರು, ಅಗಲಿದ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top