ಉಡುಪಿ: ಮೇ
15, 16 ರಂದು ಎರಡು ದಿನಗಳ ಕಾಲ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ, ಕಾಲೇಜಿನ ನೂತನ ರವೀಂದ್ರ
ಮಂಟಪದಲ್ಲಿ ನಡೆಯಲಿದೆ.
ಮೇ 15 ರಂದು
ಉಡುಪಿ ಶಾರದಾ ವಸತಿ ಶಾಲೆಯ ನಿರ್ದೇಶಕ, ವಿದ್ಯಾವಂತ ಆಚಾರ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು,
ಎಂ.ಜಿ.ಎಂ. ಕಾಲೇಜು ಪ್ರಾಂಶುಪಾಲೆ ಗಾಯತ್ರಿ ಪೈ, ಎಂಜಿ.ಎಂ. ಪಿಯು ಕಾಲೇಜು ಪ್ರಾಂಶುಪಾಲೆ ಮಾಲತಿ
ದೇವಿ, ಟಿ.ಎಂ.ಪಿ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ರಂಗ ಪೈ ಉಪಸ್ಥಿತರಿದ್ದು, ಎಂ.ಜಿ.ಎಂ.
ಕಾಲೇಜು ಟ್ರಸ್ಟ್ ಅಧ್ಯಕ್ಷ, ಸತೀಶ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ.
ಮೇ 16 ರಂದು
ನಟ, ನಿರ್ದೇಶಕ ಎಲ್ಟನ್ ಜೆಫ್ ಹಾಗೂ ತುಳು, ಕನ್ನಡ ಆಕ್ಟರ್ ಅನ್ವಿತಾ ಸಾಗರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು,
ಎಂ.ಎನ್. ನಾಯಕ್, ಭಾರತೀ ಜಯಕರ್ ಉಪಸ್ಥಿತರಿರಲಿದ್ದಾರೆ. ಮಣಿಪಾಲ್ ಅಕಾಡೆಮಿ ಆಫ್ ಜನರಲ್ ಎಜುಕೇಷನ್
ನ ಶ್ರೀಧರ್ ಪೈ ಅಧ್ಯಕ್ಷತೆ ವಹಿಸಲಿದ್ದಾರೆ.
ವಿದ್ಯಾರ್ಥಿಗಳಿಂದ
ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ, ನಾಟಕ ಪ್ರದರ್ಶನ ನಡೆಯಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

