ಎಂ.ಜಿ.ಎಂ ಕಾಲೇಜಿನಲ್ಲಿ ವಾರ್ಷಿಕೋತ್ಸವ

Upayuktha
0

ಉಡುಪಿ: ಉಡುಪಿ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವು ಎರಡು ಹಂತಗಳಲ್ಲಿ ಎಂ.ಜಿ.ಎಂ ಕ್ಯಾಂಪಸ್‌ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.ಮೊದಲನೆಯ ಹಂತದಲ್ಲಿ ಭೂಮಿಕಾ ಮತ್ತು ತಂಡ ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ ಸ್ವಾಗತ ಭಾಷಣ ಮಾಡಿದರು. ಬಳಿಕ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ವಾರ್ಷಿಕ ವರದಿ ಮಂಡಿಸಿ, ಕಾಲೇಜಿನ ಶೈಕ್ಷಣಿಕ ಸಾಧನೆಗಳ ಕುರಿತು ವಿವರಿಸಿದರು. ಮುಖ್ಯ ಅತಿಥಿಯಾಗಿ ಶಾರದಾ ರೆಸಿಡೆನ್ಷಿಯಲ್ ಶಾಲೆಯ ನಿರ್ದೇಶಕರಾದ ವಿದ್ಯಾವಂತ ಆಚಾರ್ಯ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಗೌರವ ಅತಿಥಿಗಳಾಗಿ ಎಂ.ಜಿ.ಎಂ ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಹಾಗೂ ಬಿಕಾಂ/ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಉಪಸ್ಥಿತರಿದ್ದರು. ರೋಶಲ್ ತೃತೀಯ ಬಿಸಿಎ ಕ್ರೀಡಾ ಸಾಧಕರ ಪಟ್ಟಿ ವಾಚಿಸಿದರು. ಕಾರ್ಯಕ್ರಮವನ್ನು ಮಿಥಾಲಿ ಪೈ ಹಾಗೂ ನಿಮಿತಾ ನಿರೂಪಿಸಿದರು.


ಎರಡನೆಯ ಹಂತದಲ್ಲಿ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ವಿದ್ಯಾರ್ಥಿಗಳ ಪ್ರತಿಭೆ, ಸಾಧನೆ ಹಾಗೂ ಶೈಕ್ಷಣಿಕ ಮೇಲುಗ್ಗೆಯನ್ನು ಗೌರವಿಸುವ ವಿಶೇಷ ಕಾರ್ಯಕ್ರಮವು ಶುಕ್ರವಾರ ಎಂಜಿಎಂ ಕ್ಯಾಂಪಸ್‌ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.


ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಸ್ವಾಗತ ಭಾಷಣ ಮಾಡಿ ವಿದ್ಯಾರ್ಥಿಗಳ ಸಾಧನೆಗಳನ್ನು ಶ್ಲಾಘಿಸಿದರು. ಬಳಿಕ ಅತಿಥಿಗಳಿಗೆ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾವ್ಯಶ್ರೀ ಪ್ರಾವೀಣ್ಯ ಬಹುಮಾನ ವಿಜೇತರ ಘೋಷಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಜಂಟಿ ಕಾರ್ಯದರ್ಶಿ ದನ್ಯಾ ಬಂಗೇರ ಸಾಧಕರ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಇದೇ ವೇಳೆ ಕಾಲೇಜಿನ ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿಗಳ ಘೋಷಣೆ ಹಾಗೂ ಅಭಿನಂದನಾ ಕಾರ್ಯಕ್ರಮವೂ ನಡೆಯಿತು.


ಕಾರ್ಯಕ್ರಮದಲ್ಲಿ ಎಂ.ಜಿ.ಎಂ ಕಾಲೇಜು ಟ್ರಸ್ಟ್ ಅಧ್ಯಕ್ಷರಾದ ಡಾ. ಟಿ. ಸತೀಶ್ ಯು. ಪೈ, ಮಣಿಪಾಲದ ಐಎಸ್‌ಎ ಫೌಂಡೇಶನ್ ನಿರ್ದೇಶಕ ಡಾ. ಪ್ರಭಾಕರ ಶಾಸ್ತ್ರಿ ಹಾಗೂ ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಹಾಗೂ ಬಿಸಿಎ ಸಂಯೋಜಕರಾದ ಡಾ. ಎಂ. ವಿಶ್ವನಾಥ ಪೈ, ಬಿಕಾಂ /ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಅಕ್ಷತಾ ನಾಯಕ್ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top