ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: 23ನೇ ವರ್ಷದ ಸಂಭ್ರಮಾಚರಣೆ

Upayuktha
0

 


 

ಪರ್ಕಳ: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 23ನೇ ವರ್ಷದ ಸಂಭ್ರಮ ಕಲಾ ಕೌಸ್ತುಭ ಕಾರ್ಯಕ್ರಮ ಭಾನುವಾರ ಮೇ 17ರಂದು ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಖ್ಯಾತ ಭಾಗವತ ಗಣೇಶ್ ಆಚಾರ್ಯ ಬಿಲ್ಲಾಡಿ ಇವರು ಉದ್ಘಾಟಿಸಿದರು.

 

ವೇದಿಕೆಯ ಅಧ್ಯಕ್ಷರಾದ ನಟರಾಜ ಪರ್ಕಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಆಕಾಶವಾಣಿಯ ನಿವೃತ್ತ ಸಹಾಯಕ ನಿರ್ದೇಶಕಿ ಡಾ. ಮಾಲತಿ ಆರ್. ಭಟ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಮಣ್ಯ ಜಿ. ಭಟ್ ಕುರ್ಯ, ಅಂತರಾಷ್ಟ್ರೀಯ ಮಯೂರಿ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕಿ ಶ್ರೀಮತಿ ವಂದನಾ ರೈ ಕಾರ್ಕಳ, ಡಿಜಿಟಲ್ ಕ್ರಿಯೇಟರ್ ಶಿಕ್ಷಕಿ ಸಂಧ್ಯಾ ಕಾಮತ್ ಆಗಮಿಸಿದ್ದರು.

 

ವೇದಿಕೆ ಪೋಷಕರಾದ ಭವನ ಪ್ರಸಾದ್ ಹೆಗ್ಡೆ ಮಣಿಪಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆ ಸಂಚಾಲಕರಾದ ಮಂಜುನಾಥ ಉಪಾಧ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ವೇದಿಕೆ ಅಧ್ಯಕ್ಷ ನಟರಾಜ್ ಪರ್ಕಳ ಸ್ವಾಗತಿಸಿದರು. ಸಂದರ್ಭದಲ್ಲಿ ಸೃಜನಶೀಲ ಛಾಯಾಗ್ರಾಹಕ  ನಿಧೀಶ್ ಪರ್ಕಳ ಹಾಗೂ ಗಣಪತಿ ವಿಗ್ರಹ ತಯಾರಕ ದೇವರಾಜ್ ನಾಯಕ್ ಸಣ್ಣಕ್ಕಿಬೆಟ್ಟು ಇವರನ್ನು ಸನ್ಮಾನಿಸಲಾಯಿತು.

 

ಅಶೋಕ್ ಸಣ್ಣಕ್ಕಿ ಬೆಟ್ಟು ಕಾರ್ಯಕ್ರಮ ನಿರೂಪಸಿದರು. ಶ್ರೀನಿವಾಸ್ ನಾಯಕ್ ಚಕ್ರತೀರ್ಥ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ನಾಟ್ಯ ತಂಡ ಮರ್ಣಿ ಇದರ ಕಲಾವಿದರಿಂದ ದೀಕ್ಷಾ ಗುಂಡುಪಾದೆ ನಿರ್ದೇಶನದಲ್ಲಿ ಧರೆಗಿಳಿದ ಜಗನ್ಮಾತೆ ನೃತ್ಯರೂಪಕ ಹಾಗೂ ಡೆನ್ನಾನ ಕಲಾವಿದರು ಕಾರ್ಕಳ ಇವರಿಂದ ಡೆನ್ನಾನ ನಾಟಕ ಪ್ರದರ್ಶನಗೊಂಡಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top