ವಿವಿ ಕಾಲೇಜು, ಮಂಗಳೂರು: ಪ್ರತಿಭಾ ದಿನಾಚರಣೆ ಹಾಗೂ ಕಾಲೇಜು ವಾರ್ಷಿಕೋತ್ಸವ

Upayuktha
0

  


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರತಿಭಾ ದಿನಾಚರಣೆ ಹಾಗೂ 121ನೇ ಕಾಲೇಜು ವಾರ್ಷಿಕೋತ್ಸವವನ್ನು ಕ್ರಮವಾಗಿ ಮೇ 12 ಮತ್ತು 13, 2026 ಮಂಗಳವಾರ ಮತ್ತು ಬುಧವಾರ ಬೆಳಗ್ಗೆ 9.30 ಗಂಟೆಗೆ ಕಾಲೇಜು ಆವರಣದ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ.


ಮೇ 12ರಂದು ನಡೆಯಲಿರುವ ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪೂರ್ವತನ ಅಧ್ಯಕ್ಷ ಕರ್ನಲ್ ನಿಟ್ಟೆಗುತ್ತು ಶರತ್ಭಂಡಾರಿ ಹಾಗೂ ಮಂಗಳೂರಿನ ಕಲಾ ಸೌರಭ ಪರಿಷತ್ ನಿರ್ದೇಶಕಿ ಡಾ. ಶ್ರೀವಿದ್ಯಾ ಆಗಮಿಸಲಿದ್ದಾರೆ. ಪ್ರತಿಭಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಅವರು ವಹಿಸಲಿದ್ದಾರೆ.


ಮೇ 13, 2026 ಬುಧವಾರ 121ನೇ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ. ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ ಕರ್ನಲ್ ನಿತಿನ್ಬಿಢೆ ಆಗಮಿಸಲಿದ್ದು, ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಖ್ಯಾತ ನ್ಯಾಯವಾದಿ ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಲೋಹಿದಾಸ್ಆರ್‌.  ಹಂಚಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್‌. ವಹಿಸಲಿದ್ದಾರೆ.


ಎರಡು ದಿನಗಳ ಸಭಾ ಕಾರ್ಯಕ್ರಮಗಳ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top