ಮೇ.02 ರಂದು ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭ

Upayuktha
0

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ  ಇವರ ಸಹಯೋಗದಲ್ಲಿ ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಮೇ 02 ರಂದು ಸಂಜೆ 4 ಗಂಟೆಗೆ ಬ್ರಹ್ಮಗಿರಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.  

ಕಾರ್ಯಕ್ರಮವನ್ನು ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಕೆ.ಮುರಳೀಧರ್ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಉದಯವಾಣಿಯ ವಿಶ್ರಾಂತ ಹಿರಿಯ ಉಪಸಂಪಾದಕ ನಿತ್ಯಾನಂದ ಪಡ್ರೆ ಕಾರಂತರ ಬದುಕು-ಬರಹಗಳು ಹಿರಿಯ ನಾಗರಿಕರಿಗೆ ಮಾದರಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸರೂರು ರಾಜೀವ ಶೆಟ್ಟಿ , ಚಿಂತಕ ಮುಷ್ತಾಕ್ ಹೆನ್ನಾಬೈಲ್ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ. 

 

 

Post a Comment

0 Comments
Post a Comment (0)
To Top