ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯಲ್ಲಿ ವೈದ್ಯಕೀಯ ಕಾರ್ಯಾಗಾರ

Upayuktha
0


ಮಂಗಳೂರು: ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ಆಶ್ರಯದಲ್ಲಿ ಶೈಕ್ಷಣಿಕ ಕಾರ್ಯಾಗಾರವು ಶನಿವಾರ (ಮೇ 16) ನಗರದ ದೀಪಾ ಹೋಟೆಲ್ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿ ನೇತೃತ್ವದಲ್ಲಿ ಜರಗಿತು.


ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಪ್ರಕಾಶ್‌ರವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯು ಲೈಂಗಿಕ ಶಿಕ್ಷಣ ಕಾರ್ಯಾಗಾರವನ್ನು ಏರ್ಪಡಿಸಿದ್ದು, ಇದು ಸಾರ್ವಜನಿಕರ ಲೈಂಗಿಕತೆಯಲ್ಲಿ ಇರುವ ಸಂಕೋಚ ಸ್ವಭಾವ, ಅನುಮಾನ, ಸಂದೇಹಗಳನ್ನು ಪರಿಹರಿಸಲು ಉತ್ತಮ ವೇದಿಕೆಯಾಗಿದೆ ಎಂದು ನುಡಿದು ಕಾರ್ಯಾಗಾರಕ್ಕೆ ಶುಭ ಕೋರಿದರು.


ಸಂಪನ್ಮೂಲ ವ್ಯಕ್ತಿಯಾಗಿ ಶಿರಸಿ ನಗರ ಮೂಲದ ಖ್ಯಾತ ಹಿರಿಯ ಮೂತ್ರರೋಗ ಶಾಸ್ತ್ರ ತಜ್ಞರಾದ ಡಾ. ಗಜಾನನ ಭಟ್‌ರವರು ಭಾಗವಹಿಸಿ, ವಾತ್ಸಾಯನ ಕಾಮಸೂತ್ರ ಕೃತಿಯ ಸಂಸ್ಕೃತ ಅಧ್ಯಾಯ ಮತ್ತು ಶ್ಲೋಕಗಳನ್ನು ಸಂಸ್ಕೃತ ಭಾಷೆಯಿಂದ ಆಂಗ್ಲ ಮತ್ತು ಕನ್ನಡ ಭಾಷೆಗೆ ಅನುವಾದಿಸಿ ಅತಿಥಿ ಭಾಷಣ ನೀಡಿದರು. ಬಳಿಕ ಸಭಿಕರೊಂದಿಗೆ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಮತ್ತು ಸಮಸ್ಯಗಳಿಗೆ ಸಲಹೆ ನೀಡಿದರು.



ಈ ಸಂದರ್ಭದಲ್ಲಿ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆ, ಸಾಧಿಸಿದ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಗೌರವ ಅತಿಥಿಯಾಗಿ ಪಾಲ್ಗೊಂಡ ಭಾರತೀಯ ವೈದ್ಯಕೀಯ ಶಾಸ್ತç ತಜ್ಞರ ಮಂಗಳೂರು ಶಾಖೆಯ ಅಧ್ಯಕ್ಷ ಡಾ. ರೋಶನ್‌ರವರು ಸನ್ಮಾನಿಸಿ ಅಭಿನಂದಿಸಿದರು.


ಸಂಸ್ಥೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿಯವರು ಅತಿಥಿಗಳನ್ನು ಮತ್ತು ಸಭಿಕರನ್ನು ಸ್ವಾಗತಿಸಿ, ಜನರ ಲೈಂಗಿಕ ಜ್ಞಾನದಲ್ಲಿ ಹಲವಾರು ಸಮಸ್ಯೆ, ಲೋಪ ದೋಷಗಳಿದ್ದು, ಅದನ್ನು ಪರಿಹರಿಸಲು ಈ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.


ವೇದಿಕೆಯಲ್ಲಿ ಸಂಸ್ಥೆಯ ಚುನಾಯಿತ ಅಧ್ಯಕ್ಷ, ಡಾ. ಉಲ್ಲಾಸ್ ಶೆಟ್ಟಿ, ಕೋಶಾಧಿಕಾರಿ ಡಾ. ಜ್ಯೂಲಿಯನ್ ಸಲ್ಡಾನ್ಹ ಉಪಸ್ಥಿತರಿದ್ದರು. ಡಾ. ಮಧುರಾ ಭಟ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top