ಮಂಗಳೂರು:
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮೇ
19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.
ಪಡೀಲ್ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ 10ರಿಂದ
ಮಧ್ಯಾಹ್ನ12 ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು
ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು
ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು
ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು
ತಮ್ಮ ಕುಂದು-ಕೊರತೆಗಳನ್ನು ಸಂಸದರ ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ.
ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ
ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

