ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ವೃತ್ತಿಪರ ಶಿಕ್ಷಣಕ್ಕೆ ಸಾಲ ಪಡೆಯಲು ಅರ್ಜಿ ಆಹ್ವಾನ

Upayuktha
0

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ಖ ಜನಾಂಗದ (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) 2026-27 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿ..ಟಿ/ ನೀಟ್ (ಎಂ.ಬಿ.ಬಿ.ಎಸ್/ಬಿ.ಡಿ.ಎಸ್/ಆಯುಷ್/ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬಿ./ ಬಿ.ಟೆಕ್,ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್,ವೆಟರ್ನರಿ ಆ್ಯಂಡ್ ಫಾರ್ಮ್ ಸೈನ್ಸ್ ಕೋರ್ಸಸ್) ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.                

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:

ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ರೂ. 8 ಲಕ್ಷ ಮಿತಿಯಲ್ಲಿರಬೇಕು), ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್  ಜೆರಾಕ್ಸ್ ಪ್ರತಿ, ಸಿ..ಟಿ/ನೀಟ್ ಪರೀಕ್ಷೆ ಪ್ರವೇಶ ಪತ್ರ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕ ಪಟ್ಟಿಯ ದೃಢೀಕೃತ ಪ್ರತಿ, ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ 2 ಭಾವಚಿತ್ರ.

ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು  ಮೇ 30 ಕೊನೆಯ ದಿನ. ಕೆ.ಎಂ.ಡಿ.ಸಿ ವೆಬ್‍ಸೈಟ್‍ನಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಆನ್‍ಲೈನ್ ಸಲ್ಲಿಸಿದ ಕೂಡಲೇ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) “ಮೌಲಾನಾ ಅಜಾದ್ ಭವನ” 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು-575001 ಇಲ್ಲಿಗೆ ಸಲ್ಲಿಸಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top