ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋವನ್ನು ದುರ್ಬಳಕೆ ಮಾಡಿ, ಎಡಿಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡಿದ ಆರೋಪದ ಮೇಲೆ ಡಾ. ಲಕ್ಷ್ಮೀಕಾಂತ ಸಿಂಗೆ ಎಂಬುವವರ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಪ್ರಕೋಷ್ಟದ ವತಿಯಿಂದ ಈ ಕುರಿತು ಅಧಿಕೃತ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಬಿಎನ್‌ಎಸ್ (BNS) ಕಲಂ 79 ಹಾಗೂ 352(2) ರ ಅಡಿಯಲ್ಲಿ FIR ಸಂಖ್ಯೆ: 56/2026 ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಠಾಣೆಗೆ ನಿಯೋಗ ಭೇಟಿ: ದೂರು ನೀಡುವ ಸಂದರ್ಭದಲ್ಲಿ ಕಾನೂನು ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಶ್ರೀಧರ್ ಶೆಟ್ಟಿ ಪುಳಿಂಚ, ಸಹ ಸಂಚಾಲಕರಾದ ಕೆ. ಪ್ರಮೋದ್ ಪೂಜಾರಿ, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷರಾದ ರಾಘವೇಂದ್ರ ರಾವ್, ಹಾಗೂ ವಕೀಲರುಗಳಾದ ಶುಕರಾಜ್ ಕೊಟ್ಟಾರಿ ಮತ್ತು ಜಗದೀಶ್ ಕಾಪುಮಲೆ ಉಪಸ್ಥಿತರಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಗಣ್ಯರ ತೇಜೋವಧೆ ಮಾಡುವುದು ಮತ್ತು ಸುಳ್ಳು ಸುದ್ದಿ ಹರಡಿ ಸಾರ್ವಜನಿಕರನ್ನು ಹಾದಿ ತಪ್ಪಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಈ ಸಂದರ್ಭದಲ್ಲಿ ನಿಯೋಗದ ಪ್ರಮುಖರು ಒತ್ತಾಯಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


