ಪುತ್ತೂರು:
ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು
ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇಲ್ಲಿ ಮೇ.5 ರಂದು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಹಾಗೂ ಮಾನವಿಕ ವಿಭಾಗಗಳ
ಸಹಯೋಗದಲ್ಲಿ "ರಿ ಇಮಾಜಿನಿಂಗ್ ಇಂಡಿಯಾ:
ಫ್ರಂ ಪೊಲಿಟಿಕಲ್ ಡಿಸ್ಕೋರ್ಸ್ ಟು ಕಾಂಟೆಂಪರರಿ ರಿಯಾಲಿಟಿಸ್
(Re imagining India: From Political Discourse to Contemporary Realities) ಎನ್ನುವ ವಿಚಾರದ ಮೇಲೆ ರಾಷ್ಟ್ರೀಯ
ವಿಚಾರ ಸಂಕಿರಣವು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ
ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ
ಅಧ್ಯಕ್ಷತೆಯನ್ನು ವಹಿಸಲಿದ್ದು, ಕೇರಳದ ಕೇಂದ್ರಿಯ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಪ್ರೊ.ಗೋಪ ಕುಮಾರ್ ಕಾರ್ಯಕ್ರಮವನ್ನು
ಉದ್ಘಾಟಿಸಿ ದಿಕ್ಸೂಚಿ ಭಾಷಣವನ್ನು ಮಾಡಲಿದ್ದಾರೆ.
ಸಭಾ
ಕಾರ್ಯಕ್ರಮದ ನಂತರ ವಿವಿಧ ವಿಚಾರಗಳ
ಬಗೆಗೆ ವಿಚಾರ ಸಂಕಿರಣ ನಡೆಯಲಿದ್ದು ಇದರಲ್ಲಿ ನವದೆಹಲಿಯ ಜವಹಾರ್ ಲಾಲ್ ನೆಹರೂ ಯುನಿವರ್ಸಿಟಿ
ಯ ಪ್ರೊಫೆಸರ್ ಡಾ.ಅಂಶು ಜೋಷಿ,
ಪಾಂಡಿಚೇರಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ನಂದ ಕಿಶೋರ್
ಎಂ.ಎಸ್, ನವದೆಹಲಿಯ ಸೆಂಟರ್
ಫಾರ್ ಮೆರಿಟೈಂ ಎಕಾನಮಿ ಹಾಗೂ
ಆರ್ ಐಎಸ್, ಎಂಇಎ ಇದರ ಕನ್ಸಲ್ಟೆಂಟ್
ಆಗಿರುವ ಡಾ.ಜಸ್ವಂತ್ ಸಿಂಗ್
ಕೈನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಹಾಗೂ ಈ ಮೂರು
ವಿಚಾರ ಸಂಕಿರಣಗಳ ಸಮನ್ವಯಕಾರರಾಗಿ ಮಾಜಿ ವಿಧಾನ ಸಭಾ
ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್
ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ನಡೆಯಲಿರುವ ಸಂಶೋಧನಾ ಪ್ರಬಂಧ ಮಂಡನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಲಿದ್ದಾರೆ.
ಸಮಾರೋಪ
ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ
ಭಟ್ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ
ಹಾಗೂ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಭಾಗವಹಿಸಲಿದ್ದಾರೆ
ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ
ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


