ಕಲಬುರಗಿ ಜಿಲ್ಲಾ ಬಂಜಾರ-ಲಂಬಾಣಿ ನ್ಯಾಯವಾದಿಗಳ ಸಂಘದ ನೂತನ ಘಟಕ ರಚನೆ

Upayuktha
0



ಕಲಬುರಗಿ: ಕರ್ನಾಟಕ ಪ್ರದೇಶ ಬಂಜಾರ-ಲಂಬಾಣಿ ಸೇವಾ ಸಂಘ, ಬೆಂಗಳೂರು ಆಶ್ರಯದಲ್ಲಿ ಕಲಬುರಗಿ ಜಿಲ್ಲಾ ಬಂಜಾರ-ಲಂಬಾಣಿ ನ್ಯಾಯವಾದಿಗಳ ಸಂಘದ ನೂತನ ಘಟಕವನ್ನು ರಚಿಸಲಾಯಿತು.


ನಗರದಲ್ಲಿ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ಬಿ.ಬಿ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ಹಾಜರಿದ್ದ ನ್ಯಾಯವಾದಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ನೂತನ ಜಿಲ್ಲಾಧ್ಯಕ್ಷರಾಗಿ ಕಮಲ್ ರಾಠೋಡ್, ಗೌರವಾಧ್ಯಕ್ಷರಾಗಿ ಬಾಬುರಾವ್ ಜಾಧವ್, ಉಪಾಧ್ಯಕ್ಷರಾಗಿ ಆರತಿ ರಾಠೋಡ್ ಹಾಗೂ ಹಿರಾಲಾಜ್ ಚೌವ್ಹಾಣ್, ಪ್ರಧಾನ ಕಾರ್ಯದರ್ಶಿಯಾಗಿ ಚಿಂದು ರಾಠೋಡ್, ಸಹ ಕಾರ್ಯದರ್ಶಿಯಾಗಿ ವಿನೋದ್ ಡಿ. ಚೌವ್ಹಾಣ್, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಂದ್ರ ಎಂ. ಚೌವ್ಹಾಣ್ ಹಾಗೂ ಖಜಾಂಚಿಯಾಗಿ ಹಿಂದೂಧರ್ ಜಾಧವ್ ಅವರನ್ನು ಆಯ್ಕೆ ಮಾಡಲಾಯಿತು.


ಸಂಘದ ಅಧ್ಯಕ್ಷ ಬಿ.ಬಿ. ನಾಯಕ್ ಮಾತನಾಡಿ, ನೂತನ ಪದಾಧಿಕಾರಿಗಳು ಸಂಘದ ಧ್ಯೇಯೋದ್ದೇಶಗಳನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಪಾಲಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.


ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟಗಳು, ಪ್ರತಿಭಟನೆಗಳು ಹಾಗೂ ಸಂಘಟಿತ ಚಟುವಟಿಕೆಗಳ ಮೂಲಕ ಒಂದಾಗಿ ಕಾರ್ಯನಿರ್ವಹಿಸಿ ಸಮುದಾಯದ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಅವರು ಸಲಹೆ ನೀಡಿದರು.


ಸಮಾಜದ ಸರ್ವತೋಮುಖ ಅಭಿವೃದ್ಧಿಯೇ ಸಂಘದ ಪ್ರಮುಖ ಗುರಿಯಾಗಿದ್ದು, ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು. ನೂತನ ಪದಾಧಿಕಾರಿಗಳ ಆಯ್ಕೆಗೆ ಸಮಾಜದ ಮುಖಂಡರು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top