ಟಿಸಿಎಸ್ ಟೆಕ್ ಬೈಟ್ಸ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳಿಗೆ ರನ್ನರ್ ಅಪ್ ಸ್ಥಾನ

Upayuktha
0

 


ಕಾರ್ಕಳ: ಏಪ್ರಿಲ್ ತಿಂಗಳಲ್ಲಿ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನಲ್ಲಿ ಐಟಿ ಶಿಕ್ಷಣ ಮಾನದಂಡಗಳ ಮಂಡಳಿಯ ಸಹಯೋಗದೊಂದಿಗೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಸಂಸ್ಥೆಯು ನಡೆಸಿದ ಟಿಸಿಎಸ್ ಟೆಕ್ ಬೈಟ್ಸ್ 17 ನೇ ಆವೃತ್ತಿಯ ಮಂಗಳೂರು ಪ್ರಾದೇಶಿಕ ಫೈನಲ್ಸ್ ನಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯೂರಿಟಿ ವಿಭಾಗದ 3ನೇ ವರ್ಷದ ಬಿಟೆಕ್ ವಿದ್ಯಾರ್ಥಿಗಳಾದ ಸುಜ್ಞಾನ್ ಡಿ ದೇವಾಡಿಗ ಮತ್ತು ಆದಿತ್ಯ ಭಟ್ ಕೆ ರನ್ನರ್ ಅಪ್ ಸ್ಥಾನವನ್ನು ಪಡೆದಿದ್ದಾರೆ.

ಟಿಸಿಎಸ್ ಟೆಕ್ ಬೈಟ್ಸ್ ಪ್ರತಿಷ್ಠಿತ ಎಂಜಿನಿಯರಿಂಗ್ ಐಟಿ ರಸಪ್ರಶ್ನೆಯಾಗಿದ್ದು, ಇದು ಉದಯೋನ್ಮುಖ ತಂತ್ರಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸವಾಲು ಹಾಕಿ, ವಿದ್ಯಾರ್ಥಿಗಳ ಚಿಂತನಾಚಾತುರ್ಯತೆಯನ್ನು ತೀಕ್ಷ್ಣಗೊಳಿಸುತ್ತದೆ, ನಾವೀನ್ಯತೆ ಮತ್ತು ಉತ್ಕೃಷ್ಟತೆಯ ಮನೋಭಾವವನ್ನು ಪೋಷಿಸುತ್ತದೆ. ವಿದ್ಯಾರ್ಥಿಗಳ ಸಾಧನೆಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಆಡಳಿತ, ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕೇತರ ವರ್ಗ ಪ್ರಶಂಸಿಸಿದೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top