ಮಂಗಳೂರು: ಶಾಸ್ತ್ರೀಯ ಸಂಗೀತ ಮತ್ತು ನೃತ್ಯಗಳ ಅಭ್ಯಾಸದಿಂದ ಸಂಸ್ಕಾರ, ಸಂಸ್ಕೃತಿ ಮತ್ತು ಪೌರಾಣಿಕ ಪ್ರಜ್ಞೆ ಮೂಡಲು ಸಾಧ್ಯವಿದೆ. ಎಳೆಯ ಕಲಾವಿದರಿಗೆ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಗಳು ಲಭ್ಯವಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಶಾಸ್ತ್ರೀಯ ಸಂಗೀತ ಮತ್ತು ನೃತ್ಯದ ಅಭಿರುಚಿ ಬೆಳೆಸಲು ಪ್ರೇರಣೆಯಾಗಬೇಕು ಎಂದು ಮಂಗಳೂರಿನ ಸನಾತನ ನಾಟ್ಯಾಲಯದ ನಿರ್ದೇಶಕ ಚಂದ್ರಶೇಖರ ಶೆಟ್ಟಿ ನುಡಿದರು.
ಅವರು ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ಸುರತ್ಕಲ್ ನ ನಾಗರಿಕ ಸಲಹಾ ಸಮಿತಿಯ ಸಹಯೋಗದಲ್ಲಿ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ನೃತ್ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಕರ್ಮಯೋಗಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಯುವ ಕಲಾವಿದರಿಗೆ ಶುಭ ಕೋರಿದರು.
ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಮಾತನಾಡಿ ಅವಿಭಜಿತ ದಕ್ಷಿಣ ಕನ್ನಡದ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯಿತ್ತಿರುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಗೌರವಯುತ ಪ್ರದರ್ಶನ ಅವಕಾಶಗಳನ್ನು ಕಲ್ಪಿಸಿಕೊಡ ಬೇಕು ಎಂದು ಅಗ್ರಹಿಸಿದರು.
ವಿದುಷಿ ಶಾರದಾ ಮಣಿ ಶೇಖರ್, ವಿದ್ವಾನ್ ಚಂದ್ರಶೇಖರ ನಾವಡ, ಸಂಗೀತ ಪರಿಷತ್ ನ ಅಧ್ಯಕ್ಷ ಸುಬ್ರಮಣ್ಯ ಹೆಚ್, ಉಡುಪಿ ರಾಗ ಧನ ಸಂಸ್ಥೆಯ ಅರವಿಂದ ಹೆಬ್ಬಾರ್, ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ, ವಿಭು ರಾವ್ ಉಪಸ್ಥಿತರಿದ್ದರು.
ಸುಮೇಧ ರಾವ್ ಉಡುಪಿ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಸಿಕೊಟ್ಟರು. ಶ್ರೀರಾಗ್ ಪಿ. ರಾವ್ ಉಡುಪಿ ವಯಲಿನ್ ನಲ್ಲಿ ಹಾಗೂ ಪ್ರಜ್ಞಾನ್ ನಾಯಕ್ ಉಡುಪಿ ಮೃದಂಗದಲ್ಲಿ ಸಹಕರಿಸಿದರು.
ವಿದುಷಿ ಶಾರದಾ ಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ಶಿಷ್ಯೆ ಸಿಂಚನ ಎಸ್. ಕುಲಾಲ್ ಅವರಿಂದ ಏಕವ್ಯಕ್ತಿ ಭರತ ನಾಟ್ಯ ಪ್ರದರ್ಶನ ನಡೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


