ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ, ಕಾಂಗ್ರೆಸ್ ನ ಮುಸ್ಲಿಂ ತುಷ್ಟೀಕರಣದ ಪರಮಾವಧಿ: ಸತೀಶ್ ಕುಂಪಲ

Upayuktha
0

  


ಮಂಗಳೂರು: ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವನ್ನು ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಅನಗತ್ಯ ಸಂಘರ್ಷಕ್ಕೆ ಎಡೆ ಮಾಡಿದೆ. ಇದು ಕಾಂಗ್ರೆಸ್ ಮುಸ್ಲಿಂ ತುಷ್ಠೀಕರಣದ ಪರಮಾವಧಿ ಮತ್ತು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದ್ದಾರೆ.

 

ಇದು ಸರ್ಕಾರದ ವೈಫಲ್ಯ, ಪಕ್ಷದ ನಾಯಕತ್ವದ ಗೊಂದಲ ಮತ್ತು ಶಿಸ್ತು ಕ್ರಮದ ಹೆಸರಲ್ಲಿ  ಕಾಂಗ್ರೆಸ್ ಮುಸ್ಲಿಂ ನಾಯಕರನ್ನು ವಜಾ ಗೊಳಿಸಿರುವುದರಿಂದ ವ್ಯಗ್ರಗೊಂಡಿರುವ ಮುಸ್ಲಿಂ ಸಮುದಾಯವನ್ನು ಸಮಾಧಾನ ಪಡಿಸಲು ಶಿಕ್ಷಣ ಕ್ಷೇತ್ರವನ್ನು ಬಳಸಿರುವುದು ರಾಜ್ಯಕ್ಕೆ ಕಾಂಗ್ರೆಸ್ ನಿಂದ ಬಂದಿರುವ ದುರ್ದೈವ. ಶಿಕ್ಷಣ ಸಚಿವರಂತು ದಿಕ್ಕುದಿಸೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಸರ್ಕಾರ ತಕ್ಷಣ ತನ್ನ ಹಿಜಾಬ್ ಬಗೆಗಿನ ಆದೇಶವನ್ನು ಹಿಂಪಡೆಯಬೇಕು ಎಂದು ಕುಂಪಲ ರವರು ಆಗ್ರಹಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top