ಭಕ್ತಿಗೆ ದೇವರ ಮನೆ, ಜ್ಞಾನಕ್ಕೆ ಪುಸ್ತಕ ಮನೆ: ಡಾ.ಮಾನಸ

Upayuktha
0

 



ಉಡುಪಿ: ಭಕ್ತಿಯ ಸಂಕೇತವಾಗಿ ದೇವರ ಮನೆಯಂತೆ, ಜ್ಞಾನದ ಸಂಕೇತವಾಗಿ ಪ್ರತಿ ಮನೆಯಲ್ಲೂ ಪುಸ್ತಕ ಮನೆ (ಗ್ರಂಥಾಲಯ) ಇರಬೇಕು ಎಂದು ರಾಜ್ಯ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ತಿಳಿಸಿದ್ದಾರೆ.


ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಸಾಹಿತ್ಯ ಪರಿಷÀತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಗೆ ಶ್ರೀಕೃಷ್ಣ ಮಠದ ಬಳಿಯ ವಾದಿರಾಜ ರಸ್ತೆಯಲ್ಲಿರುವ ಉಡುಪಿ ಟೆಂಪಲ್ ಇನ್ ಹೋಮ್ ಸ್ಟೇಯಲ್ಲಿ ಗಿಡಕ್ಕೆ ನೀರೆರೆದು ಗುರು ನೀಡಿ ಮಾತನಾಡಿದರು.


ಪುಸ್ತಕ ಓದಿನಿಂದ ಬದುಕಿನ ಸವಾಲು ಎದುರಿಸಿ ಗೆಲ್ಲಬಹುದು. ಮನೆಗೊಂದು ಗ್ರಂಥಾಲಯ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ 10 ಜನರ ಜಿಲ್ಲಾ ಜಾಗೃತಿ ಸಮಿತಿ ಕಾರ್ಯಪ್ರವೃತ್ತವಾಗಿದೆ ಎಂದರು. ಮನೆಯೇ ಗ್ರಂಥಾಲಯ ಯೋಜನೆ ಸಂಘಟಕ ರವಿರಾಜ್ ಎಚ್. ಪಿ. ಮಾತನಾಡಿ, ಬಸ್ ನಿಲ್ದಾಣ, ಆಸ್ಪತ್ರೆ, ಐಸ್ಕ್ರೀಮ್ ಅಂಗಡಿಗಳ ಸಹಿತ ಉಡುಪಿ ಜಿಲ್ಲೆಯ 210 ಮನೆಗಳಲ್ಲಿ ಗ್ರಂಥಾಲಯ ನಿರ್ಮಾಣವಾಗಿದೆ ಎಂದರು.


ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ  ಉಡುಪಿ ವಿಶ್ವನಾಥ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕ  ನಾಗರಾಜ್ ಹೆಬ್ಬಾರ್ ಮರವಂತೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಉಪಸ್ಥಿತರಿದ್ದರು.


ಜನಾರ್ದನ ಕೊಡವೂರು ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಪೂರ್ಣಿಮಾ ಜನಾರ್ದನ ವಂದಿಸಿದರು.


ಮನೆಗೊಂದು ಗ್ರಂಥಾಲಯ ಉಡುಪಿ ಜಿಲ್ಲಾ ಜಾಗೃತಿ ಸಮಿತಿ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅವರನ್ನು ಸನ್ಮಾನಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top