ವಿವೇಕಾನಂದ ಪದವಿ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾಗಿ ಪ್ರಕಾಶ್ ಕುಮಾರ್ ಪಿ

Upayuktha
0

ಪುತ್ತೂರು:  ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಪುತ್ತೂರು ಇಲ್ಲಿನ   ಪರೀಕ್ಷಾಂಗ ಕುಲಸಚಿವರಾಗಿ ಕಾಲೇಜಿನ ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಪಿ ನೇಮಕಗೊಂಡಿದ್ದಾರೆ ಎಂದು  ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಂಎಸ್ಸಿ ಹಾಗೂ ಎಂಟೆಕ್ ಪದವೀಧರರಾಗಿರುವ ಇವರು 26 ವರ್ಷಗಳಿಂದ ಕಾಲೇಜಿನ ಗಣಕ ಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಹಾಗೂ ವಿಭಾಗ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿರುವ ಇವರು ಕಾಲೇಜಿನ ಐಕ್ಯೂಎಸಿ ಘಟಕದ ಸಹಸಂಯೋಜಕರಾಗಿಯೂ ಸೇವೆ ಸಲ್ಲಿಸಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ಶಾಸ್ತ್ರ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.ಜೊತೆಗೆ ಕಾಲೇಜಿನ ಗಣಕ ಶಾಸ್ತ್ರದ ವಿದ್ಯಾರ್ಥಿಗಳಿಗೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಾಜೆಕ್ಟ್ ತಯಾರಿಕೆಯಲ್ಲಿಯೂ ಮಾರ್ಗದರ್ಶನವನ್ನು ನೀಡಿರುತ್ತಾರೆ. ಪ್ರಸ್ತುತ ಕಾಲೇಜಿನ ವಿಜ್ಞಾನ ವಿಭಾಗದ ಡೀನ್ ಆಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top