ಸಂತ ಫಿಲೋಮಿನಾ ಕಾಲೇಜಿನಲ್ಲಿ "ಕ್ವಾಂಟಾ 2ಕೆ26" ಭೌತಶಾಸ್ತ್ರ ಉತ್ಸವ

Upayuktha
0


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ಭೌತಶಾಸ್ತ್ರ ವಿಭಾಗದ ವತಿಯಿಂದ “ಕ್ವಾಂಟಾ 2ಕೆ26” ಅಂತರವಿಭಾಗೀಯ ಭೌತಶಾಸ್ತ್ರ ಉತ್ಸವವು ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಡಾ ವಿಜಯಕುಮಾರ್ ಎಂ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಸಾಧನೆಗೆ ಮಾತ್ರ ಸೀಮಿತವಾಗದೆ, ಇಂತಹ ಉತ್ಸವಗಳಲ್ಲಿ ಆಯೋಜಿಸಲಾದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕೌಶಲ್ಯಾಭಿವೃದ್ಧಿಯನ್ನು ಸಾಧಿಸಬೇಕು ,ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ ವಿನಾಯಕ ಕೆ ಎಸ್, ಸಹಾಯಕ ಪ್ರಾಧ್ಯಾಪಕರು ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥರು, ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಬಂಟ್ವಾಳ, ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ ಚಿಂತನೆ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಉತ್ಸವವನ್ನು ಶ್ಲಾಘಿಸಿದರು.


ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಕೆ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉತ್ಸವದ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.


ಸಂಯೋಜಕರಾದ ಪ್ರಾಧ್ಯಾಪಕಿ ಪೂಜಾಶ್ರೀ ವಿ ರೈ ಹಾಗೂ ವಿಜ್ಞಾನ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಮಾನಸಾ ಹಾಗೂ ತಂಡ ಪ್ರಾರ್ಥಿಸಿ , ವಿದ್ಯಾರ್ಥಿ ಸಂಯೋಜಕರಾದ ಎ ಜೆ. ಆಯಿಷತ್ ಜಬೀನಾ ಸ್ವಾಗತಿಸಿ ,ಮನೀಶ್ ಬಿ ಪಿ ಅತಿಥಿಗಳನ್ನು ಪರಿಚಯಿಸಿ, ಅಶ್ವಿನಿ ಎನ್ ವಂದಿಸಿ, ಸುಷ್ಮಾ ವಾಗ್ಲೆ ಕಾರ್ಯಕ್ರಮ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top