ಉಡುಪಿ: ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಭಾಪತಿ ಮತ್ತು ಉಡುಪಿ ಜಿಲ್ಲಾ ಸಭಾಪತಿಗಳಾದ ಬಸ್ರೂರು ರಾಜೀವ ಶೆಟ್ಟಿ ಇವರು ಕರ್ನಾಟಕ ಸರ್ಕಾರದ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್ ಅವರನ್ನು ಭೇಟಿಯಾಗಿ ರೆಡ್ಕ್ರಾಸ್ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ರೆಡ್ಕ್ರಾಸ್ ಚಟುವಟಿಕೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ರಾಜ್ಯಪಾಲರು ರೆಡ್ ಕ್ರಾಸ್ನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವು ಸಲಹೆಗಳನ್ನು ನೀಡಿದರು. ರಾಜ್ಯ ಆಡಳಿತ ಮಂಡಳಿಯ ಕೆಲವು ಸದಸ್ಯರು ಉಪಸ್ಥಿತರಿದ್ದರು.
ವಾರ್ಷಿಕ ಮಹಾಸಭೆ:
ಉಡುಪಿ ಜಿಲ್ಲಾ ರೆಡ್ಕ್ರಾಸ್
ಘಟಕದ ವಾರ್ಷಿಕ ಮಹಾಸಭೆಯು ರೆಡ್ಕ್ರಾಸ್
ಅಧ್ಯಕ್ಷರು ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಇವರ
ಅಧ್ಯಕ್ಷತೆಯಲ್ಲಿ ಮೇ 13 ರಂದು ಬೆಳಿಗ್ಗೆ 10.30 ಕ್ಕೆ
ಉಡುಪಿ ಟೌನ್ಹಾಲಿನ
ಮಿನಿಹಾಲ್ನಲ್ಲಿ
ನಡೆಯಲಿದ್ದು ರೆಡ್ಕ್ರಾಸ್ನ
ಸದಸ್ಯರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


