ಸ.ಪ್ರ.ದ. ಕಾಲೇಜು, ತೆಂಕನಿಡಿಯೂರು: ಹಳೆ ವಿದ್ಯಾರ್ಥಿ ಸಂಘದ ಸ್ನೇಹ ಸಮ್ಮಿಲನ “ಬೆಸುಗೆ"

Upayuktha
0

 


ಉಡುಪಿ: ಸರಕಾರಿ ಕಾಲೇಜುಗಳ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾದುದ್ದು. ಕಾಲೇಜಿನ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮತ್ತಷ್ಟು ಚಟುವಟಿಕೆಗಳು ಸಾಗಿ ಬರಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ಸುವರ್ಣ ಹೇಳಿದ್ದಾರೆ.

 

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಬೆಸುಗೆ -2026ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

 

ಮುಖ್ಯ ಅತಿಥಿಯಾಗಿ ಎಸ್ಕೆಪಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ, ಕನಸು ಕಾಣಬೇಕು ಕಂಡ ಕನಸನ್ನು ಪರಿಶ್ರಮದ ಮೂಲಕ ನನಸು ಮಾಡಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ತಿಳಿಸಿದರು.

 

ವಿಶೇಷ ಆಹ್ವಾನಿತರಾಗಿ ಗಿಚ್ಚಿ ಗಿಲಿಗಿಲಿ ಮತ್ತು ಕಾಮಿಡಿ ಕಿಲಾಡಿ ಖ್ಯಾತಿಯ ದೀಕ್ಷಾ ಬ್ರಹ್ಮಾವರ ಮಾತನಾಡಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಉಡುಪಿ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಸುಚಿತ್ರಾ ಟಿ. ಮತ್ತು ಹಾವೇರಿ ಕೆಎಲ್ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಶಮಂತ್ ಕುಮಾರ್ ಕೆ.ಎಸ್. ಅತಿಥಿಗಳಾಗಿದ್ದರು.

 

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವಕರ್ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ ಯು.ಬಿ., ಕಾರ್ಯದರ್ಶಿ ಮುನಾವರ್ ಕೆ., ಕೋಶಾಧಿಕಾರಿ ನೈನಾ ಜೆ.ಶೆಟ್ಟಿ ಸಂಚಾಲಕ ಸುಷ್ಮಾಟಿ., ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ಪ್ರಸಾದ್ ನಾಯಕ್, ಸಂತೋಷ್ ಸುವರ್ಣ ಉಪಸ್ಥಿತರಿದ್ದರು.

 

ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ರೋಷನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ದರು. ಶಮಿತಾ ಮತ್ತು ಸುಹಾಸ್ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಲೀಲಾವತಿ ವಂದಿಸಿದರು. ತದನಂತರ ಕಲಾ ಚಿಗುರು ತಂಡದಿಂದ ಹಾಸ್ಯ ಕಾರ್ಯಕ್ರಮ ಮತ್ತು ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top