ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ PRCN, 120 ದಿನಗಳ ತರಬೇತಿ ಶಿಬಿರದಲ್ಲಿ ಯಶಸ್ವಿ
ಉಜಿರೆ:
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ
ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರೀಶ್ ಶೆಟ್ಟಿ ಇತ್ತೀಚೆಗೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಾಂಪ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ ಪ್ರತಿಷ್ಠಿತ ಪ್ರೀ-ಕಮಿಷನ್ ಕೋರ್ಸ್ (PRCN) ಯಶಸ್ವಿಯಾಗಿ ಪೂರ್ಣಗೊಳಿಸಿ ರಾಷ್ಟ್ರೀಯ ಕೆಡೆಟ್ ಕೋರ್ (NCC) ನೌಕಾ ವಿಭಾಗದಲ್ಲಿ ಸಬ್
ಲೆಫ್ಟಿನೆಂಟ್ ರ್ಯಾಂಕ್
ಪಡೆಯುವುದರ ಮೂಲಕ ಎನ್.ಸಿ.ಸಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಇವರು
ಜನವರಿ 5 ರಿಂದ ಏಪ್ರಿಲ್ 4ರ
ವರೆಗೆ ನಡೆದ ತರಬೇತಿಯಲ್ಲಿ,
ಎನ್.ಸಿ.ಸಿ ವಿದ್ಯಾರ್ಥಿಗಳಿಗೆ
ಮಾರ್ಗದರ್ಶನ ನೀಡಲು ವಿನ್ಯಾಸಗೊಳಿಸಲಾದ ನಾಯಕತ್ವ, ಶಿಸ್ತು, ಸಂಘಟನಾ ಚಾತುರ್ಯ ಮತ್ತು ಡ್ರಿಲ್ ಮುಂತಾದ ವಿಷಯಗಳ ಕುರಿತು ತರಬೇತಿ ಪಡೆದುಕೊಂಡಿದ್ದಾರೆ. ಇವರಿಗೆ ಎನ್.ಸಿ.ಸಿ.ಯ ಮಹಾನಿರ್ದೇಶಕರು (DGNCC) ಸಬ್ ಲೆಫ್ಟಿನೆಂಟ್
ಪದವಿಯನ್ನು ನೀಡಿ ಗೌರವಿಸಿದ್ದಾರೆ.
ಮೂಲತಃ
ಉಡುಪಿಯ ಕುಂದಾಪುರ ತಾಲೂಕಿನ ಮುದೂರಿನವರಾಗಿದ್ದು, ಧಾರವಾಡದ ಡಾ. ಡಿ ಜಿ
ಶೆಟ್ಟಿ ವಿದ್ಯಾ ಸಂಸ್ಥೆಯಲ್ಲಿ ಪದವಿಯನ್ನು ಮುಗಿಸಿ, ಸ್ನಾತಕೋತ್ತರ ಪದವಿಯನ್ನು ಉಜಿರೆಯ ಎಸ್ ಡಿ ಎಂ
ಕಾಲೇಜಿನಲ್ಲಿ ಪೂರೈಸಿದ್ದಾರೆ. ಕಳೆದ ಹನ್ನೊಂದು ವರ್ಷಗಳಿಂದ
ಉಜಿರೆಯ ಎಸ್.ಡಿ.ಎಂ
ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ
ಸಾಧನೆಗೆ ಎಸ್.ಡಿ.ಎಂ
ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್,
ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ,
ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.
"ಹರೀಶ್
ಶೆಟ್ಟಿಯವರು ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿ. ಹನ್ನೊಂದು ವರ್ಷಗಳಿಂದ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಮೂರು ವರ್ಷಗಳಿಂದ ಎನ್.ಸಿ.ಸಿ ನೌಕ ವಿಭಾಗದಲ್ಲಿ ಕೇರ್ ಟೇಕರ್ ಆಗಿ ನೇಮಕಗೊಂಡಿದ್ದರು. ಇದೀಗ ಕಠಿಣ ಪರಿಶ್ರಮ, ಶಿಸ್ತು ಮತ್ತು ದೃಢತೆಯಿಂದ PRCN ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿ, ಸಬ್ ಲೆಫ್ಟಿನೆಂಟ್ ರ್ಯಾಂಕ್ ಪಡೆಯುವುದರ ಮೂಲಕ ಕಾಲೇಜಿನ ಎನ್. ಸಿ.ಸಿ ನೌಕಾ ವಿಭಾಗದ ಅಸೋಸಿಯೇಟ್ ಎನ್.ಸಿ.ಸಿ ಆಫೀಸರ್ ಆಗಿ ನೇಮಕಗೊಂಡಿರುವುದು ಪ್ರಶಂಸನೀಯ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
- ಪ್ರೊ. ವಿಶ್ವನಾಥ ಪಿ.
ಪ್ರಾಂಶುಪಾಲರು, ಎಸ್.ಡಿ.ಎಂ ಕಾಲೇಜು ಉಜಿರೆ
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


