ಎಸ್.ಎಸ್.ಎಲ್.ಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Upayuktha
0

 


ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ  ಎಸ್.ಎಸ್.ಎಲ್.ಸಿ ಪರೀಕ್ಷೆ-2 ಪರೀಕ್ಷೆಗಳು ಮೇ 18 ರಿಂದ 25 ವರೆಗೆ ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

   ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ.

    ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್ಸ್ಟಾಲ್, ಫೋಟೋ ಕಾಪಿಯರ್ಗಳನ್ನು ಮುಚ್ಚಲು ಆದೇಶಿಸಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗಿರುತ್ತದೆ. ಟ್ಯಾಬ್ಲೆಟ್, ಪೆನ್ಡ್ರೆöÊವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿರುತ್ತದೆ.

    ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೋಬೈಲ್ ಫೋನ್ ಅನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನ್ಯ/ ಬಾಹ್ಯ ವ್ಯಕ್ತಿಗಳು ಪ್ರವೇಶಿಸಿ ವಿದ್ಯಾರ್ಥಿಗಳ ಏಕಾಗ್ರತೆಯನ್ನು ಭಂಗಗೊಳಿಸುವ ಸಾಧ್ಯತೆ ಇರುವುದರಿಂದ ಪರೀಕ್ಷಾ ಕೇಂದ್ರಗಲ್ಲಿ ಪರೀಕ್ಷೆ ನಡೆಯುವ ವೇಳೆಯಲ್ಲಿ ಯಾವುದೇ ಬಾಹ್ಯ / ಅನ್ಯ ವ್ಯಕ್ತಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

    ಎಲ್ಲಾ ಪರೀಕ್ಷಾ ಸಿಬ್ಬಂದಿ/ ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಸದರಿ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ / ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಮೇ 18 ರಿಂದ 25 ವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top