ಎಸ್‍ಎಸ್‍ಎಲ್‍ಸಿ ಟಾಪರ್ ಸೌಜನ್ಯಳಿಗೆ ಕಡಪಟ್ಪಿ ಶಾಲೆಯಿಂದ ಸನ್ಮಾನ

Upayuktha
0




ಹುನಗುಂದ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಈ ಬಾರಿ ರಾಜ್ಯಕ್ಕೆ ಟಾಪರಾದ ಹುನಗುಂದ ಪಟ್ಟಣದ ಕುವರಿ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಆಕ್ಸಫರ್ಡ ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಬಸವರಾಜ ಕಂದಕೂರ ಅವರನ್ನು ಪಟ್ಟಣದ ಎಸ್.ಎಸ್.ಕಡಪಟ್ಟಿ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.



ಸಂಸ್ಥೆಯ ಮ್ಯಾನೇಜಿಂಗ ಟ್ರಸ್ಟಿ ಬಸವರಾಜ ಎಸ್. ಕಡಪಟ್ಟಿ ಮಾತನಾಡಿ ಸೌಜನ್ಯ ಬಸವರಾಜ ಕಂದಕೂರ ಅವರು ಪೂರ್ವ ಪ್ರಾಥಮಿಕ ದಿಂದ 5 ನೇ ತರಗತಿ ವರೆಗೆ ನಮ್ಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. 10ನೇ ತರಗತಿಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಶ್ರದ್ಧೆ, ಪರಿಶ್ರಮ, ಪಾಲಕರ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಈ ಯಶಸ್ಸು ಸಾದ್ಯವಾಗಿದೆ. ಇದು ನಮ್ಮ ಶಾಲೆಗೆ ಮತ್ತು ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸುವುದರ ಜೊತೆಗೆ ವಿದ್ಯಾರ್ಥಿನಿಯ ಈ ಸಾಧನೆಯು ಮುಂದಿನ ದಿನಗಳಲ್ಲಿ ಶಾಲೆಯ ಇತರೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿದೆ ಎಂದರು. 


ಸನ್ಮಾನ ಸಮಾರಂಭದಲ್ಲಿ ಚೇರ್ಮನ್ ರಾದ ಲತಾ ಬಸವರಾಜ ಕಡಪಟ್ಟಿ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು ಸಾಧಕ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top