ಸಾಲಿಗ್ರಾಮ: ಶ್ರೀ ಗುರು ನರಸಿಂಹ ದೇವಸ್ಥಾನದಲ್ಲಿ ಶಂಕರ ಜಯಂತಿ ಆಚರಣೆ

Upayuktha
0

 


 

ಸಾಲಿಗ್ರಾಮ: ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಹಾಗೂ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಶ್ರೀ ಗುರು ನರಸಿಂಹ ದೇವಸ್ಥಾನದ ಜ್ಞಾನ ಮಂದಿರದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಸಮಾರಂಭ ಇತ್ತೀಚೆಗೆ ನಡೆಯಿತು.

ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ ಸಮಾರಂಭವನ್ನು ಉದ್ಘಾಟಿಸಿ ಶ್ರೀ ಶಂಕರರು ಭಾರತದ ನಾಲ್ಕು ಕಡೆಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿ ಭಾರತದಲ್ಲಿ ಅದ್ವೈತ ಸಿದ್ಧಾಂತವನ್ನು ಶಾಶ್ವತವಾಗಿ ನೆಲೆಗೊಳಿಸಿ, ಇಂದಿಗೂ ಜಗತ್ತಿನಲ್ಲಿ ವೇದಧರ್ಮ ಶ್ರೇಷ್ಟವಾಗಿಸುವಲ್ಲಿ ಮಾಡಿದ ಅಪ್ರತಿಮ ಸಾಧನಾ ಮೂರ್ತಿ, ಅವರ ಹೆಸರನ್ನು ಶಾಶ್ವತವಾಗಿರಿಸುವ ಕಾರ್ಯಕ್ರಮಗಳು ನಡೆಯಬೇಕಾಗಿದೆ ಎಂದರು.

ಯಡಾಡಿ ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಸುದಕ್ಷಿಣ ಆರ್ ಉಡುಪ ವಸಂತ ವೇದ ಶಿಬಿರದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶ್ರೀ ಶಂಕರರು ತಮ್ಮದೇ ಶಕ್ತಿಯಿಂದ ಸನಾತನ ಧರ್ಮಕ್ಕೆ ಮರುಜೀವ ನೀಡಿದ ದಿವ್ಯ ಶಕ್ತಿ ಎಂದರು.

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಸಭಾದ ಗೌರವಾಧ್ಯಕ್ಷ ಎಂ. ಶಿವರಾಮ ಉಡುಪ, ಉಪಾಧ್ಯಕ್ಷರಾದ ಪಿ.ಸಿ ಹೊಳ್ಳ, ಸಿ.ಸುಬ್ರಾಯ ಉರಾಳ ಮುಂತಾದವರು ಉಪಸ್ಥಿತರಿದ್ದರು.

ಸಭಾದ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ನಾಗರಾಜ ಉಪಾಧ್ಯ ಧನ್ಯವಾದ ಅರ್ಪಿಸಿದರು.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top