ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕಾನೂನು ಪದವೀಧರರಿಗೆ ಶಿಷ್ಯವೇತನ : ಅರ್ಜಿ ಆಹ್ವಾನ

Upayuktha
0

 


ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು ಮತ್ತು ಸಿಖ್ಖ್ ಸಮುದಾಯದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರುವ ಕಾನೂನು ಪದವೀಧರ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3,50,000 ಗಳ ಮಿತಿಯಲ್ಲಿರಬೇಕು. ತರಬೇತಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ನಾಲ್ಕು ವರ್ಷಗಳ ವರೆಗೆ ಮಾಹೆಯಾನ ರೂ.5000 ಗಳಂತೆ ಶಿಷ್ಯವೇತನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ, ಅವಶ್ಯವಿರುವ ದಾಖಲಾತಿಗಳೊಡನೆ ಜೂನ್ 12 ಒಳಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಶಿವಳ್ಳಿ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 0820-2574596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

 

 

 

Post a Comment

0 Comments
Post a Comment (0)
To Top