ವಿಶಿಷ್ಟ ಚೇತನರಿಗೆ ಸ್ವಾವಲಂಬಿ ಬದುಕು: ಡಾ.ಎಂ. ಶಾಂತರಾಮ ಶೆಟ್ಟಿ

Upayuktha
0


ಮಂಗಳೂರು: ವಿಶಿಷ್ಟ ಚೇತನರು ಯಾರನ್ನೂ ಅವಲಂಬಿಸದೆ ಸ್ವಾವಲಂಬಿ ಬದುಕು ನಡೆಸಲು ಸಾಧ್ಯವಿದೆ ಎನ್ನುವುದನ್ನು ಹಲವಾರು ಮಂದಿ ಸಾಧಿಸಿ ತೋರಿಸಿದ್ದಾರೆ. ಅಂತಹ ಸಾಧಕರು ವಿಶಿಷ್ಟ ಚೇತನರಿಗೆ ಮಾತ್ರವಲ್ಲ ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಡಾ.ಎಂ. ಶಾಂತರಾಮ ಶೆಟ್ಟಿ ಹೇಳಿದರು.


ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ವತಿಯಿಂದ ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ದ.ಕ. ಜಿಲ್ಲಾ ಶಾಖೆ ಹಾಗೂ ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಭಾನುವಾರ ನಗರದ ರೆಡ್‌ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ವಿಶಿಷ್ಟ ಚೇತನರ ಸಂಘದ 34ನೇ ವಾರ್ಷಿಕ ಸಮಾವೇಶ, ದಿವ್ಯಾಂಗರಿಗೆ ವೈದ್ಯಕೀಯ ನೆರವು, ವೈದ್ಯಕೀಯ ತಪಾಸಣೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ ಕ್ರಾಸ್ ದ.ಕ.ಜಿಲ್ಲಾ ಶಾಖೆಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ "ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾ ರೆಡ್‌ ಕ್ರಾಸ್ ಸಂಸ್ಥೆ ವಿಶಿಷ್ಟ ಚೇತನರಿಗೆ ಸವಲತ್ತು ವಿತರಣೆ ಜತೆಗೆ ಅವಶ್ಯ ಇರುವ ಸೇವೆಗಳನ್ನು ನೀಡಲು ಸದಾ ಬದ್ಧವಾಗಿದೆ ಎಂದರು.


ಕೆಎಂಸಿಯ ಆರ್ಥೋಪೆಡಿಕ್ ವಿಭಾಗದ ಮುಖ್ಯಸ್ಥ ಡಾ.ಕೆ.ಆರ್.ಕಾಮತ್, ಚೇತನಾ ವಿಶೇಷ ಮಕ್ಕಳ ಶಾಲೆಯ ಸಂಚಾಲಕ ವಿನೋದ್ ಶೆಣೈ, ವಿ.ವಿ. ಕಾಲೇಜಿನ ಯುವ ರೆಡ್‌ ಕ್ರಾಸ್ ಸಂಯೋಜನಾಧಿಕಾರಿ ಡಾ.ಭಾರತಿ ಪಿಲಾರ್, ರೆಡ್‌ ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾ ರೆಡ್‌ ಕ್ರಾಸ್‌ನ ಉಪಾಧ್ಯಕ್ಷ ಡಾ.ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಪಿ.ಬಿ.ಹರೀಶ್ ರೈ, ಡಾ.ಸುಮನ .ಬಿ. ಉಪಸ್ಥಿತರಿದ್ದರು.


ಸಂಘದ ಕೋಶಾಧಿಕಾರಿ ಸದಾಶಿವ ಲೆಕ್ಕಪತ್ರ ಮಂಡಿಸಿದರು. ಶಾಲೆಟ್ ಮತ್ತು ಜಯಕಲಾ ಫಲಾನುಭವಿಗಳ ವಿವರ ನೀಡಿದರು.

ವಿಶಿಷ್ಟ ಚೇತನರ ಸಂಘದ ಅಧ್ಯಕ್ಷ ಡಾ.ವಿ. ಮುರಳೀಧರ ನಾಯ್ಕ್  ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ವಂದಿಸಿದರು. ದಿನಮಣಿ ರಾವ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top