ಉಳ್ಳಾಲದಲ್ಲಿ ಕಂಟೈನರ್‌ನಿಂದ ಎಣ್ಣೆ ಸೋರಿಕೆಯಿಂದ ಆದ ರಸ್ತೆ ಅವಘಡಕ್ಕೆ ಸಭಾಧ್ಯಕ್ಷ ಯು.ಟಿ. ಖಾದರ್ ವಿಷಾದ

Upayuktha
0

  


ಮಂಗಳೂರು: ಉಳ್ಳಾಲದಲ್ಲಿ ಸಂಭವಿಸಿದ ಅವಘಡ ಅತ್ಯಂತ ವಿಷಾದನೀಯವಾಗಿದೆ. ರಸ್ತೆ ಮೇಲೆ ಕಂಟೈನರ್ನಿಂದ ಎಣ್ಣೆ ಸೋರಿಕೆಯಾಗಿರುವುದರಿಂದ ಬೈಕ್ಗಳು ಸ್ಕಿಡ್ ಆಗಿ ಹಲವರು ಗಾಯಗೊಂಡಿರುವುದು ತೀವ್ರ ಕಳವಳಕಾರಿಯಾಗಿದೆ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ವಿಷಾದ ವ್ಯಕ್ತಪಡಿಸಿದ್ದಾರೆ.

 

ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ಪ್ರಕರಣಕ್ಕೆ ಸಂಬಂಧಿಸಿದ ಕಂಟೈನರ್ ಹಾಗೂ ಫಿಶ್ ಮಿಲ್ ಮಾಲಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ ಅವರಿಗೆ ಸೂಚಿಸಿದ್ದಾರೆ.

 

ಉಳ್ಳಾಲದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಸಂಪೂರ್ಣ ಬೆಂಬಲವಿದ್ದರೂ, ಸಾರ್ವಜನಿಕರ ಜನಜೀವನಕ್ಕೆ ತೊಂದರೆ ಉಂಟುಮಾಡುವ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

 

ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಕಂಟೈನರ್ಗೆ ಸಂಬಂಧಿಸಿದ ಫಿಶ್ ಮಿಲ್ ಮಾಲಿಕರು ಸಂಪೂರ್ಣವಾಗಿ ಭರಿಸಬೇಕು ಎಂದು ಒತ್ತಾಯಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top