ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಭೌತಶಾಸ್ತ್ರ ವಿಭಾಗದ ಆಶ್ರಯದಲ್ಲಿ “ಹವಾಮಾನ
ಸಂಕಷ್ಟ: ಈಗಲೇ ಕ್ರಮ ಕೈಗೊಳ್ಳಬೇಕಿದೆ” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ ವಿಜಯಕುಮಾರ್ ಎಂ ವಹಿಸಿ, ತಮ್ಮ ಅಧ್ಯಕ್ಷೀಯ
ಭಾಷಣದಲ್ಲಿ ಇತ್ತೀಚಿನ ಹವಾಮಾನ ಬದಲಾವಣೆಗಳು ಹಾಗೂ ಅವುಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ
ಆತಂಕ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡಾ ವಿನಾಯಕ ಕೆ ಎಸ್, ಸಹಾಯಕ ಪ್ರಾಧ್ಯಾಪಕರು ಮತ್ತು ಸಸ್ಯಶಾಸ್ತ್ರ
ವಿಭಾಗ ಮುಖ್ಯಸ್ಥರು, ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ಬಂಟ್ವಾಳ ಭಾಗವಹಿಸಿ, ಬಿಎಸ್ಸಿ ವಿದ್ಯಾರ್ಥಿಗಳಿಗೆ
ಹವಾಮಾನ ಸಂಕಷ್ಟದ ಗಂಭೀರತೆ, ಅದರ ಪ್ರಮುಖ ಕಾರಣಗಳು ಹಾಗೂ ಭವಿಷ್ಯದಲ್ಲಿ ಅದನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ
ಕ್ರಮಗಳ ಕುರಿತು ಮಾಹಿತಿ ನೀಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ವಿಜ್ಞಾನ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಭೌತಶಾಸ್ತ್ರ
ವಿಭಾಗ ಮುಖ್ಯಸ್ಥರಾದ ಡಾ. ಕೆ. ಚಂದ್ರಶೇಖರ್ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

