ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಟಾರ್ಟ್ ಅಪ್ ಸಂಸ್ಥೆ ಡಿಜಿಕಾಂಪ್ ಟೆಕ್ನಾಲಜೀಸ್ ಉದ್ಘಾಟನೆ

Upayuktha
0

 


 

ಪುತ್ತೂರು: ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಜಗತ್ತಿನ ವಾತಾವರಣವನ್ನು ನಿರ್ಮಿಸಿ ಅವರಿಗೆ ಅದರ ಆಗುಹೋಗುಗಳ ಬಗ್ಗೆ ಮಾಹಿತಿಯನ್ನು ನೀಡುವ ಸಲುವಾಗಿ ಕಾಲೇಜಿನಲ್ಲಿ ಸ್ಟಾರ್ಟ್ಅಪ್ಗಳ ಸ್ಥಾಪನೆಗೆ ಅವಕಾಶವನ್ನು ನೀಡಲಾಗುತ್ತಿದೆ, ಇಂದು 3ನೇ ಕಂಪೆನಿಯ ಉದ್ಘಾಟನೆಯಾಗಿದೆ ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಕಂಪೆನಿಗೆ ಪೂರ್ಣ ಪ್ರಯೋಜನವಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.

 

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಟಾರ್ಟ್ಅಪ್ಗಳ ಆವರಣ ಲಾಂಚ್ವರ್ಸ್ನಲ್ಲಿ ಡಿಜಿ ಕಾಂಪ್ ಟೆಕ್ನಾಲಜೀಸ್ ಎನ್ನುವ ಸ್ಟಾರ್ಟ್ಅಪ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಕಾಲೇಜು ಸಮಾಜಕ್ಕೆ ಒಳಿತಾಗುವ, ರೈತ ಸಮುದಾಯಕ್ಕೆ ಸಹಕಾರಿಯಾಗುವ ಯೋಜನಗಳ ಮೂಲಕ ಸಮಾಜಮುಖೀ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಇದೂ ಅದರ ಒಂದು ಅಂಗ ಎಂದು ನುಡಿದರು.

 

ಸಂಸ್ಥೆಯ ಸ್ಥಾಪಕರು ಮತ್ತು ಪಾಲುದಾರರಾದ ಕಾರ್ತಿಕ್ ಭಟ್ ಮಾತನಾಡಿ ಮಕ್ಕಳ ಆಟಿಕೆಯಿಂದ ಹಿಡಿದು ದೊಡ್ಡ ದೊಡ್ಡ ಉಪಕರಣಗಳೂ ಕೂಡಾ ಚೀನಾದಿಂದ ಆಮದಾಗುತ್ತಿವೆ. ಇದನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಗಳು ನಡೆಯುತ್ತಲೇ ಇವೆ. ಆಮದಾಗುತ್ತಿರುವ ಕೆಲವು ಉಪಕರಣಗಳನ್ನು ಇಲ್ಲಿಯೇ ತಯಾರಿಸಬಹುದು ಎನ್ನುವ ದೃಷ್ಟಿಕೋನದಿಂದ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ಇಲೆಕ್ಟ್ರಾನಿಕ್ಸ್ ಸಂಬಂಧಿಸಿದ ಪಿಸಿಬಿ ಗಳ ತಯಾರಿ, ಮೈಕ್ರೋಪ್ರೋಸೆಸರ್ಗಳ ಜೋಡಣೆ ಮುಂತಾದ ಕಾರ್ಯವನ್ನು ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಪವರ್ ಇಲೆಕ್ಟ್ರಾನಿಕ್ಸ್ ಸಾಧನಗಳನ್ನು ತಯಾರಿಸುವ ಯೋಚನೆಯೂ ಇದೆ ಎಂದರು.

 

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ, ವಿಭಾಗ ಮುಖ್ಯಸ್ಥರು, ಸಂಸ್ಥೆಯ ಇನ್ನೋರ್ವ ಪಾಲುದಾರರಾದ ಪದ್ಮಸ್ವರೂಪ್ ಮುರ್ಗಜೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

ಇಲೆಕ್ಟ್ರಾನಿಕ್ಸ್ ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top