ರಾಜ್ಯ ಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ: ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Upayuktha
0

ಬೆಂಗಳೂರಿನಲ್ಲಿ ನಡೆದ 'ಬಾಂಧವ ಕಪ್ -2026' ರಲ್ಲಿ ಮಹಿಳೆಯರ ತಂಡ ಪ್ರಥಮ, ಪುರುಷರ ತಂಡ ತೃತೀಯ

 


ಉಜಿರೆ: ಬೆಂಗಳೂರು ನಗರ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಜಯನಗರದ ಕಿತ್ತೂರ ರಾಣಿ ಚೆನ್ನಮ್ಮ ಒಳಾಂಗಣದಲ್ಲಿ ಆಯೋಜಿಸಿದ್ದ 'ಬಾಂಧವ ಕಪ್ -2026' ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

 

ತಂಡದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕ್ರೀಡಾ ಸಂಘದ ವಿದ್ಯಾರ್ಥಿಗಳಾದ ಶ್ರಿಯಾ, ಪ್ರಿಯಾಂಕ, ಐಶ್ವರ್ಯ  ರಕ್ಷಿತಾ, ಶ್ರಿಯಾ, ಸಂಗೀತ, ಜಸ್ಲಿನ್, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ಅಂಜಲಿ, ಚಂದು, ಹರಿಣಿ, ವರುಣಾ, ವರ್ಷಾ, ಇಂಚರಾ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

 

ಚಾಂಪಿಯನ್ ಶಿಪ್ ಪಂದ್ಯಾವಳಿಯನ್ನು ಕರ್ನಾಟಕ ಸರ್ಕಾರದ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ, ಪದ್ಮನಾಭನಗರ ಗ್ಯಾರಂಟಿ ಯೋಜನೆಯ ಅಧ್ಯಕ್ಷರ ಪ್ರಮೋದ್ ಶ್ರೀನಿವಾಸ್ ಭಾಗಿಯಾಗಿ ಉಜಿರೆಯ ಎಸ್.ಡಿ.ಎಂ ತಂಡಕ್ಕೆ ಮೆಚ್ಚುಗೆಯನ್ನುವ್ಯಕ್ತಪಡಿಸಿದರು. ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಆರ್ ಹರ್ಷ, ಪ್ರಧಾನ ಕಾರ್ಯದರ್ಶಿ ಆಂಟೋನಿ ಜೋಸೆಫ್ ವಿಜೇತ ತಂಡಕ್ಕೆ ಪ್ರಶಸ್ತಿ ನೀಡಿ ಗೌರವಿಸಿದರು.

 

ವಿಜೇತ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಮತ್ತು ವಾಲಿಬಾಲ್ ತರಬೇತುದಾರ ಸುದೀನ್ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

 


ಎಸ್.ಡಿ.ಎಂ ಪುರುಷರ ತಂಡಕ್ಕೆ ಪ್ರಶಸ್ತಿ:

 

ಇದೇ ಕಿತ್ತೂರರಾಣಿ ಚೆನ್ನಮ್ಮ ಒಳಾಂಗಣದಲ್ಲಿ ಆಯೋಜಿಸಿದ್ದ 'ಬಾಂಧವ ಕಪ್ -2026' ರಾಜ್ಯ ಮಟ್ಟದ ಪುರುಷರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

 

ತಂಡದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕ್ರೀಡಾ ಸಂಘದ ವಿದ್ಯಾರ್ಥಿಗಳಾದ ಶಿವು, ಸುಭಾಷ್ ರಾಜ್, ಮನ್ವಿತ್, ಪ್ರತೀಕ್, ಮಯೂರ, ಕುಮಾರ್, ಸಚಿನ್, ಪ್ರಣೀತ್, ಆಡಿಸ್, ಕೌಶಿಕ್ ಶೇಯನ್ ಪಾಲ್ಗೊಂಡಿದ್ದರು. ತಂಡಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನಿಡಿರುತ್ತಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top