ರಾಜ್ಯ ಮಟ್ಟದಲ್ಲಿ ಮಿಂಚಿದ ಚಿಂತನ್ ಎಸ್ ಶೆಟ್ಟಿ; ರಾಷ್ಟ್ರೀಯ ಜಲಕ್ರೀಡಾಕೂಟಕ್ಕೆ ಕರ್ನಾಟಕ ತಂಡಕ್ಕೆ ಆಯ್ಕೆ

Upayuktha
0

 


ಮಂಗಳೂರು: ಎನ್ಆರ್ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಪ್ರತಿಭಾವಂತ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು, ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದು ರಾಜ್ಯದ ಗಮನ ಸೆಳೆದಿದ್ದಾರೆ.

ಚಿಂತನ್ ಶೆಟ್ಟಿ ಅವರು 50 ಮೀ. ಮತ್ತು 100 ಮೀ. ಬಟರ್ಫ್ಲೈ ವಿಭಾಗದಲ್ಲಿ ಚಿನ್ನದ ಪದಕ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಹಾಗೂ 100 ಮೀ. ಫ್ರೀಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಾಧನೆಯ ಹಿನ್ನೆಲೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಲು ನಡೆಯಲಿರುವ 79ನೇ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಚಾಂಪಿಯನ್ಶಿಪ್ – 2026ಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಮಟ್ಟದ ಸ್ಪರ್ಧೆ ಜೂನ್ 16ರಿಂದ ಗುಜರಾತ್ ಅಹಮದಾಬಾದ್ ವೀರ್ ಸಾವರ್ಕರ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.

ಪ್ರಸ್ತುತ ಚಿಂತನ್ ಅವರು ಬೆಂಗಳೂರಿನ ಲಕ್ಷ್ಯಾನ್ ಅಕಾಡೆಮಿ ಆಫ್ ಸ್ಪೋರ್ಟ್ಸ್ನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜು ಬಂಟ್ಸ್ ಹಾಸ್ಟೆಲ್ ವಿದ್ಯಾರ್ಥಿಯಾಗಿದ್ದಾರೆ.

ಚಿಂತನ್ ಅವರ ಸಾಧನೆಗೆ ಕ್ರೀಡಾಭಿಮಾನಿಗಳು, ತರಬೇತುದಾರರು ಹಾಗೂ ಶಿಕ್ಷಣ ಸಂಸ್ಥೆಯವರು ಅಭಿನಂದನೆ ಸಲ್ಲಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top