ಸುಪ್ತ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ: ಜಯಾನಂದ ಪೆರಾಜೆ

Upayuktha
0

 


ಮಾಣಿ: ಮಕ್ಕಳ ಸುಪ್ತ ಪ್ರತಿಭೆಗಳನ್ನು ಪ್ರಕಟಿಸುವುದಕ್ಕೆ ಬೇಸಿಗೆ ಶಿಬಿರವು ಸಹಕಾರಿಯಾಗಿದೆ. ಮಕ್ಕಳ ಸೃಜನ ಶೀಲತೆ, ಕೌಶಲ್ಯ ವರ್ಧನೆಗೆ ಪೂರಕವಾಗಿದೆ ಎಂದು ಎಸ್.ವಿ.ಎಸ್. ದೇವಳ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಯಾನಂದ ಪೆರಾಜೆ ಹೇಳಿದರು.

 

ಮಾಣಿ ಗ್ರಾ.ಪಂ.ಕೇಂದ್ರದ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಸುಜಿತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

 


ಮಾಣಿ ಗ್ರಾ.ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಪ್ರೀತಿ ಡಿನ್ನಾ ಪಿರೇರಾ, ಅಭಿವೃದ್ಧಿ ಅಧಿಕಾರಿ ಗಿರಿಜಾ ಪಿ, ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ರಾಜೇಂದ್ರ ವೈ ಬಿಳಿಯೂರು, ಆಪ್ತಸಮಾಲೋಚಕಿ ವಿದ್ಯಾ ಭಾಗವಹಿಸಿದ್ದರು. ಲೈಲಾ ಸ್ವಾಗತಿಸಿ, ಗ್ರಂಥಪಾಲಕಿ ಗೀತಾಶ್ವಿನಿ ವಂದಿಸಿದರು. 45 ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top